ಸೋಮವಾರದಿಂದ ಅಂಗನವಾಡಿ, LKG -UKG ಆರಂಭಕ್ಕೆ ಸರ್ಕಾರ ಹಸಿರು ನಿಶಾನೆ

Team Newsnap
1 Min Read

ಮುಂದಿನ ಸೋಮವಾರ (ನವೆಂಬರ್‌ 8 ) ದಿಂದ ಎಲ್‍ಕೆಜಿ-ಯುಕೆಜಿ ಆರಬಿಸಲು ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.

ಕೋವಿಡ್‌ ನಿಯಮಗಳನ್ನು ಪಾಲಿಸಿ ಆರಂಭಿಸುವಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಮಾರ್ಗಸೂಚಿಯಲ್ಲಿ ಏನಿದೆ ?

  • ಅರ್ಧ ದಿನ ಮಾತ್ರ ತರಗತಿಗಳನ್ನು ನಡೆಸಬೇಕು.
  • ಶೇ. 2 ಕ್ಕಿಂತ ಕಡಿಮೆ ಕೊರೊನಾ ಪ್ರಕರಣ ಇರುವ ತಾಲೂಕುಗಳಲ್ಲಿ ಮಾತ್ರ ಅವಕಾಶ.
  • ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿ ತರಬೇಕು.
  • ನಿತ್ಯ ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು.
  • ಎಲ್ಲಾ ಶಿಕ್ಷಕರು, ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 50 ವರ್ಷ ಮೇಲ್ಪಟ್ಟವರು ಫೇಸ್ ಶೀಲ್ಡ್ ಧರಿಸಬೇಕು.
  • ಶಿಕ್ಷಕರು, ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.
  • ಮನೆಯಿಂದಲೇ ಮಕ್ಕಳು ಉಪಹಾರ ಮತ್ತು ಕುಡಿಯುವ ನೀರು ತರಲು ಅವಕಾಶ ಕೊಡಬೇಕು.
  • ಶಾಲೆಗಳಲ್ಲಿ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.

ರಾಜ್ಯದ ಎಲ್ಲಾ ಅಂಗನವಾಡಿಗಳೂ ಆರಂಭ :

anganavadi

ಈಗಾಗಲೇ ಹಂತ ಹಂತವಾಗಿ ಎಲ್ಲಾ ಶಾಲಾ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸಿರುವ ಸರ್ಕಾರ, ಇದೀಗ ನವೆಂಬರ್ 8 ರಿಂದಲೇ ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನೂ ಆರಂಭಿಸಲು ಅನುಮತಿ ನೀಡಲಾಗಿದೆ.

Share This Article
Leave a comment