ಕೋವಿಡ್ 4 ನೇ ಅಲೆ ನಿಯಂತ್ರಿಸುವ ಕ್ರಮಗಳ ಮಾರ್ಗದರ್ಶಿ ಸೂತ್ರಗಳನ್ನು ಏ.27 ರ ನಂತರ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ದೆಹಲಿಯಲ್ಲಿ ಕೊರೋನಾ 4 ನೇ ಅಲೆ ಅಬ್ಬರ ಹೆಚ್ಚಾಗುತ್ತಿದೆ. ಹೀಗಾಗಿ ಪ್ರಧಾನ ಮಂತ್ರಿಗಳು ಏ. 27 ರಂದು ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ . ನಂತರ ರಾಜ್ಯದಲ್ಲಿ ಕೈಗೊಳ್ಳುವ ಕ್ರಮಗಳ ಬಗ್ಗೆ ಮಾಹಿತಿ ಸಿದ್ದಪಡಿಸಲಾಗುವುದು ಎಂದರು.
ನಮಗೆ ಈಗಾಗಲೇ ಕಳೆದ ಮೂರು ಕೊರೊನಾ ಅಲೆಗಳಿಂದ ಆಗಿರುವ ಸಮಸ್ಯೆ , ಪರಿಹಾರದ ದಾರಿಗಳನ್ನು ಕಂಡುಕೊಳ್ಳುವ ಬಗ್ಗೆ ನಮಗೆ ಅನುಭವ ಇದೆ. ಅಲ್ಲದೆ 4 ನೇ ಅಲೆಯ ಸ್ವರೂಪದ ಬಗ್ಗೆ ತಜ್ಞರು ಮಾಹಿತಿ ಕಲೆ ಹಾಕಿದ್ದಾರೆ ಎಂದು ಹೇಳಿದರು.
ಈ ಎಲ್ಲಾ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು, ಪ್ರಧಾನಿ ಸಭೆಯ ನಂತರ ಅವರು ನೀಡುವ ಸೂಚನೆಗಳನ್ನು ತೆಗೆದುಕೊಂಡು ಹೊಸ ಮಾರ್ಗದರ್ಶಿ ಸೂತ್ರಗಳನ್ನು ತಯಾರಿಸಲಾಗುವುದು ಎಂದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು