ಕೊರೊನಾದಿಂದಾಗಿ ಉದ್ಯಮ ಕ್ಷೇತ್ರಗಳಷ್ಟೇ ನಷ್ಟ ಅನುಭವಿಸಿ ಲ್ಲ. ಇದರ ನೇರ ಪರಿಣಾಮ ಸರ್ಕಾರದ ಮೇಲೆಯೂ ದೊಡ್ಡ ಪ್ರಮಾಣದಲ್ಲಿ ಆಗಿದೆ. ಹೀಗಾಗಿ ರಾಜ್ಯ ಸರ್ಕಾರ ಸಾಲದ ಮೊರೆ ಹೋಗಿದೆ.
ಈ ನಿಟ್ಟಿನಲ್ಲಿ ಬರೋಬ್ಬರಿ ರೂ. 33 ಸಾವಿರ ಕೋಟಿ ಸಾಲ ಪಡೆಯುವ ಕುರಿತು ಸಂಪುಟ ಸಭೆಯ ಅನುಮೋದನೆ ಪಡೆಯಲಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ಕುರಿತು ನಿರ್ಣಯ ತೆಗೆದುಕೊಳ್ಳಲಾಗಿದೆ.
ಈ ಕುರಿತು ಕೇಂದ್ರ ಸರ್ಕಾರ ಕೂಡ ನಿರ್ದೇಶನ ನೀಡಿತ್ತು. ಜಿಎಸ್ ಟಿ ಅನುಷ್ಠಾನದಿಂದ ಉಂಟಾಗುವ ಕೊರತೆ ನೀಗಿಸಿಕೊಳ್ಳುವುದಕ್ಕಾಗಿ ಸಾಲ ಮಾಡುವ ಆಯ್ಕೆಯನ್ನು ಕೇಂದ್ರವೇ ನೀಡಿತು. ಹೀಗಾಗಿ ಆರ್ಥಿಕ ಹೊಣೆಗಾರಿಕೆ ಕಾಯ್ದೆಗೆ ತಿದ್ದುಪಡಿ ತಂದು ಸಾಲ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.
ಸಂಪುಟದಲ್ಲಿ ಈ ಕುರಿತು ತೀರ್ಮಾನಿಸಿ ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ರಾಜ್ಯಕ್ಕೆ ಜಿಎಸ್ ಟಿ ಪರಿಹಾರ ರೂ. 11 ಸಾವಿರ ಕೋಟಿ ಬರಬೇಕಿತ್ತು. ಎಲ್ಲ ರಾಜ್ಯಗಳ ಬೇಡಿಕೆಯಂತೆ ನಾವು ಬೇಡಿಕೆ ಇಟ್ಟಿದ್ದೇವೆ. ಈ ವಿಷಯದಲ್ಲಿ ನಮ್ಮದೂ ರಾಜಿ ಮಾತಿಲ್ಲ. ಸಧ್ಯದ ಪರಿಸ್ಥಿತಿಯಲ್ಲಿ ಸಾಲ ಪಡೆಯಲು ತೀರ್ಮಾನಿಸಿದ್ದೇವೆ ಎಂದು ಮಾಧುಸ್ವಾಮಿ ಹೇಳಿದ್ದಾರೆ.
ಸರ್ಕಾರ ಈ ನಿರ್ಧಾರ ತೆಗೆದು ಕೊಳ್ಳುವುದರಿಂದ ಈ ಸಮಸ್ಯೆ ಕೂಡ ಜನರ ಮೇಲೆಯೇ ಪರಿಣಾಮ ಬೀರಲಿದೆ. ಇದರಿಂದಾಗಿ ಜನರ ಮೇಲೆ ತೆರಿಗೆ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು