ಕಾಂಗ್ರೆಸ್ ನ ನೂತನ ಪದಾಧಿಕಾರಿ ಗಳ ಆಯ್ಕೆ ಕುರಿತಂತೆ ಪಟ್ಟಿ ಕಳುಹಿಸಿಕೊಡಲು ಪಕ್ಷದ ಹೈಕಮಾಂಡ್ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯಗೂ ಸೂಚನೆ ನೀಡಿದೆ.
ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಜೋರಾಗಿರುವ ನಡುವೆಯೇ ನೂತನ ಪದಾಧಿಕಾರಿಗಳ ಆಯ್ಕೆ ಕುರಿತಂತೆ ಪಟ್ಟಿ ಕಳುಹಿಸಿಕೊಡಲು ಸಿದ್ದರಾಮಯ್ಯ ಅವರನ್ನು ಕೇಳಿರುವುದು ಕುತೂಹಲ ಮೂಡಿಸಿದೆ.
ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ಭೇಟಿ ನೀಡಿ ಪಕ್ಷದ ವರಿಷ್ಠರ ಜೊತೆಗೆ ಮಾತುಕತೆ ನಡೆಸಿದ್ದರು. ಶಿವಕುಮಾರ್ ಅವರ ಭೇಟಿ ಬೆನ್ನಲ್ಲೇ ಪದಾಧಿಕಾರಿಗಳ ಆಯ್ಕೆಗೆ ಪಟ್ಟಿ ಕಳುಹಿಸಿಕೊಡಿ ಎಂದು ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡುವ ಮೂಲಕ ಪದಾಧಿಕಾರಿಗಳ ಆಯ್ಕೆ ಕುರಿತಂತೆ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ವಿಶ್ವಾಸಕ್ಕೆ ತೆಗೆದುಕೊಂಡಿದೆ.
ಪಕ್ಷದ ಪದಾಧಿಕಾರಿಗಳ ನೇಮಕದಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಪರಮಾಧಿಕಾರವಿದ್ದರೂ ಕೂಡ ಕಾಂಗ್ರೆಸ್ ವರಿಷ್ಠರು ಸಿಎಲ್ಪಿ ನಾಯಕನ ಮೊರೆ ಹೋಗಿದೆ.
ಸದ್ಯ ವರಿಷ್ಠರ ಸೂಚನೆ ಮೇರೆಗೆ ಸಿದ್ದರಾಮಯ್ಯ ಅವರು ಪದಾಧಿಕಾರಿಗಳ ಪಟ್ಟಿ ಸಿದ್ಧಪಡಿಸುವುದರಲ್ಲಿ ಬ್ಯುಸಿಯಾಗಿದ್ದಾರೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ