May 21, 2022

Newsnap Kannada

The World at your finger tips!

supremco

ಹಿಜಾಬ್ ವಿವಾದ; ತುರ್ತು ವಿಚಾರಣೆಗೆ ಮಧ್ಯೆ ಪ್ರವೇಶ ಮಾಡಲ್ಲ – ಸುಪ್ರೀಂ

Spread the love

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್​ ನಿರಾಕರಿಸಿದೆ.

ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಜೋರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಹಿರಿಯ ನಾಯಕ ಕಪಿಲ್ ಸಿಬಲ್, ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು.

ಸುಪ್ರೀಂ ಕೋರ್ಟ್​ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿದೆ.

ಸದ್ಯ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​​ ಪೀಠ ವಿಚಾರಣೆ ನಡೆಸುತ್ತಿದೆ. ಹೈಕೋರ್ಟ್​ನ ವಿಸ್ತೃತ ಪೀಠ ವಿಚಾರಣೆ ನಡೆಸಿ ಆದೇಶ ನೀಡಲಿ.

ಆದೇಶದ ಬಳಿಕವೂ ಅಗತ್ಯ ಬಿದ್ದರೆ, ಮುಂದೆ ನೋಡೋಣ. ಸದ್ಯ ಸುಪ್ರೀಂಕೋರ್ಟ್​ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

error: Content is protected !!