ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ವಿಡಿಯೋದಲ್ಲಿದ್ದ ಯುವತಿಯ ಮನೆಗೆ ನಿನ್ನೆ ಎಸ್ಐಟಿ ತಂಡ ಏಕಾಏಕಿ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.
ಈ ವೇಳೆ ಆ ಯುವತಿಯ ಮನೆಯಲ್ಲಿ ಲಕ್ಷಾಂತರ ರೂ. ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.
ಆ ಯುವತಿ ವಾಸವಾಗಿದ್ದ ಬೆಂಗಳೂರಿನ ಆರ್ಟಿ ನಗರದಲ್ಲಿರುವ ಮನೆಯಲ್ಲಿ ನಿನ್ನೆ ರಾತ್ರಿ 10 ಗಂಟೆಯವರೆಗೂ ಎಸ್ಐಟಿ ತಂಡ ಪರಿಶೀಲನೆ ನಡೆಸಿತ್ತು.
ಈ ವೇಳೆ ಆಕೆಯ ಮನೆಯಲ್ಲಿ 9.2 ಲಕ್ಷ ರೂ. ಹಣ ಪತ್ತೆಯಾಗಿದೆ. ಆ ಹಣವನ್ನು ವಶಕ್ಕೆ ಪಡೆದು, ಹಣದ ಮೂಲದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.
ಎಸಿಪಿ ಧರ್ಮೇಂದ್ರ ನೇತೃತ್ವದ ಎಸ್ಐಟಿ ತಂಡದಿಂದ ಆಕೆಯ ಮನೆಯಲ್ಲಿ ಪರಿಶೀಲನೆ ನಡೆಸಲಾಗಿತ್ತು. ಸಿಡಿಯಲ್ಲಿರುವ ಯುವತಿಯನ್ನು ಯಾರಾದರೂ ಇತ್ತೀಚಿಗೆ ಮತ್ತೆ ಸಂಪರ್ಕಿಸಿದ್ದರಾ? ಆಕೆ ಇಲ್ಲಿದ್ದ ಸಂದರ್ಭದಲ್ಲಿ ಬೇರೆ ಯಾರಾದರೂ ಇಲ್ಲಿ ಭೇಟಿ ನೀಡುತ್ತಿದ್ದರಾ? ಎಂಬ ಬಗ್ಗೆ ಕಟ್ಟಡದ ಮಾಲೀಕರ ಬಳಿ ಪ್ರಶ್ನೆ ಮಾಡಲಾಗಿದೆ
ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಯುವತಿಯ ಮನೆ ಪರಿಶೀಲಿಸಿದ ಎಸ್ ಐಟಿ ತಂಡ ಅಲ್ಲಿ ಸಿಕ್ಕ ಹಣವನ್ನು ವಶಕ್ಕೆ ಪಡೆದಿದೆ. ಆ ಮನೆಯಲ್ಲಿ ಯುವತಿಗೆ ಸಂಬಂಧಿಸಿದ ಕೆಲವು ವಸ್ತುಗಳು, ಕೆಲವು ಮಹತ್ವದ ದಾಖಲೆಗಳು ಪತ್ತೆಯಾಗಿವೆ.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ