ಬಿಜೆಪಿ – ಜೆಡಿಎಸ್ ಮೈತ್ರಿ ಯ ಫಲವಾಗಿ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ಮಂಗಳವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಭಾಗಿಯಾಗದ ಹಿನ್ನೆಲೆಯಲ್ಲಿ ಬಸವರಾಜ ಹೊರಟ್ಟಿ ಅವಿರೋಧವಾಗಿ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿ, ಸಭಾಪತಿಗಳ ಸ್ಥಾನದಲ್ಲಿ ಕುಳಿತುಕೊಂಡರು.
ಸಭಾಪತಿಗಳ ಸ್ಥಾನಕ್ಕೆ ಜೆಡಿಎಸ್‌ನಿಂದ ಬಸವರಾಜ ಹೊರಟ್ಟಿ ಅವರ ಹೆಸರನ್ನು ಕೆ ಟಿ ಶ್ರೀಕಂಠೇಗೌಡರು ಸೂಚಿಸಿದರು. ಆ ಬಳಿಕ ಸಭಾಪತಿಗಳ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ನಾಸೀರ್ ಅಹ್ಮದ್ ಪರ ಹೆಸರನ್ನು ಸೂಚಿಸಿದ ಸದಸ್ಯ ಎಂ.ನಾರಾಯಣಸ್ವಾಮಿ ಮೊದಲು ಚುನಾವಣಾ ಪ್ರಕ್ರಿಯೆ ಮುಂದೂಡಿ. ಮೊದಲು ನಿನ್ನೆಯ ಕಾಯಿದೆ ಬಗ್ಗೆಯ ಗೊಂದಲವನ್ನು ಸರಿಪಡಿಸಿ ಎಂದು ಸಭಾಧ್ಯಕ್ಷ ಪ್ರಾಣೇಶ್ ಅವರಲ್ಲಿ ಮನವಿ ಮಾಡಿದರು.
ಎಂ.ನಾರಾಯಣಸ್ವಾಮಿ ಮನವಿ ತಿರಸ್ಕರಿಸಿದ ಸಭಾಧ್ಯಕ್ಷ ಎಂ.ಕೆ. ಪ್ರಾಣೇಶ್, ಮೊದಲು ಚುನಾವಣೆ ನಡೆಸೋಣ. ಅಜೆಂಡಾದ ಪ್ರಕಾರ ಹೋಗಬೇಕಾಗುತ್ತದೆ. ನೀವೆಲ್ಲಾ ನಿಮ್ಮ ನಿಮ್ಮ ಆಸನಕ್ಕೆ ಹೋಗಿ ಎಂದು ಸೂಚನೆ ನೀಡಿದ್ದರು. ಚುನಾವಣಾ ಪ್ರಕ್ರಿಯೆ ನಡೆಯಲು ಅವಕಾಶ ಮಾಡಿಕೊಟ್ಟರು.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ