‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಕೇಂದ್ರ ಸರಕಾರ ‘ವೈ’ ಕೆಟಗರಿ ಭದ್ರತೆ ನೀಡುತ್ತದೆ
ಈ ಸಿನಿಮಾ ಭಾರೀ ವಿವಾದ ಎಬ್ಬಿಸಿದ ನಂತರ ನಿರ್ದೇಶಕರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವೆಯಂತೆ. ಈ ಹಿನ್ನೆಲೆಯಲ್ಲಿ ಭದ್ರತೆ ಕೊಡಲು ಸಕಾ೯ರ ತೀರ್ಮಾನಿಸಿದೆ
ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಕಥೆಯು ಸತ್ಯಕ್ಕೆ ದೂರವಾಗಿದೆ ಎಂದು ಕೆಲವರು ವಾದ ಮಾಡಿದರೆ, ನೈಜ ಘಟನೆಯನ್ನೂ ಸಿನಿಮಾ ಮಾಡಿದ್ದೇನೆ ಎಂದಿದ್ದಾರೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ.
ಹಲವು ತಿಂಗಳ ಕಾಲ ಸಂಶೋಧನೆ ಮಾಡಿ, ಮಾಹಿತಿ ಕಲೆ ಹಾಕಿ ಚಿತ್ರಕಥೆ ಬರೆದಿದ್ದೇನೆ. ಇದರಲ್ಲಿ ಯಾವ ಅಂಶವೂ ಕಲ್ಪನೆಯಿಂದ ಮೂಡಿದ್ದಲ್ಲ ಎಂದು ಹೇಳಿದ್ದಾರೆ.
ಕೆಲವು ಕಡೆ ಚಿತ್ರಕ್ಕೆ ವಿರೋಧ ವ್ಯಕ್ತವಾಗಿದೆ. ಇಂತಹ ಚಿತ್ರಗಳಿಂದ ಕೋಮಗಲಭೆ ಆಗುವ ಸಾಧ್ಯತೆ ಇದೆ. ಜನರ ಭಾವನೆಗಳನ್ನು ಕೆರಳಿಸುವ ಪ್ರಯತ್ನವನ್ನು ಈ ಸಿನಿಮಾ ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.
ಕಾಶ್ಮೀರಿ ಪಂಡಿತರ ಸಾವಿನ ಲೆಕ್ಕಾಚಾರದಲ್ಲೂ ಚರ್ಚೆ ನಡೆಯುತ್ತಿದೆ. ಗತಿಸಿರುವ ಕಾಲಕ್ಕೆ ಮತ್ತೆ ಗುದ್ದಲಿ ಹಾಕಿ, ಉತ್ಕನನ ಮಾಡುವಂತಹ ಕೆಲಸಗಳೂ ನಡೆಯುತ್ತಿವೆ. ಈ ಕಾರಣಕ್ಕಾಗಿ ನಿರ್ದೇಶಕರಿಗೆ ಭದ್ರತೆ ನೀಡಬೇಕು ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ‘ವೈ’ ಶ್ರೇಣಿ ಭದ್ರತೆ ನೀಡಲು ತೀರ್ಮಾನಿಸಿದೆ ಎನ್ನಲಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್