January 4, 2025

Newsnap Kannada

The World at your finger tips!

ಥಿಯೇಟರ್

the Kashmir files

ಮೇ 13 ಕ್ಕೆ ಕನ್ನಡದಲ್ಲೇ ಜಿ 5 OTT ಯಲ್ಲಿ ‘ದಿ ಕಾಶ್ಮೀರಿ ಫೈಲ್ಸ್ ‘ಚಿತ್ರ ಬಿಡುಗಡೆ

Spread the love

ಸಂಚಲನ ಸೃಷ್ಟಿಸಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಮೇ 13ಕ್ಕೆ ಜೀ5 OTTಯಲ್ಲಿ ಪ್ರಿಮಿಯರ್ ಆಗಲಿದೆ,

ದಿ ಕಾಶ್ಮೀರಿ ಫೈಲ್ಸ್ ಸಿನಿಮಾ, ಇದೀಗ ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಡಬ್ ಆಗಿ ಜೀ 5 OTTಯಲ್ಲಿ ರಿಲೀಸ್ ಆಗುತ್ತಿದೆ.

ಕಾಶ್ಮೀರ ಪಂಡಿತರ ಮೇಲಾದ ದೌರ್ಜನ್ಯ, ನಿರಾಶ್ರಿತರ ಹತ್ಯೆ ಕುರಿತು ತಯಾರಿಸಿದ್ದ ಈ ಸಿನಿಮಾ ಬಾಕ್ಸಾಫೀಸ್‌ನ್ನು ಕೊಳ್ಳೆ ಹೊಡೆದಿತ್ತು.

ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರು, ಸೆಲೆಬ್ರಿಟಿಗಳು, ಜನಸಾಮಾನ್ಯರು ಸಿನಿಮಾ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಅತಿರಥ ಮಹಾರಥ ತಾರಬಳಗ ನಟಿಸಿದ್ದರು. ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ ಮತ್ತು ದರ್ಶನ್ ಕುಮಾರ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಅಮೋಘವಾಗಿ ಅಭಿನಯಿಸಿದ್ದರು.

Copyright © All rights reserved Newsnap | Newsever by AF themes.
error: Content is protected !!