May 22, 2022

Newsnap Kannada

The World at your finger tips!

srishaila

ಶ್ರೀಶೈಲದಲ್ಲಿ ಕರ್ನಾಟಕದ ಯುವಕನನ್ನು ಹತ್ಯೆ ಮಾಡಿದ ವ್ಯಾಪಾರಸ್ಥರು – 200 ವಾಹನ ಜಖಂ

Spread the love

ಆಂಧ್ರಪ್ರದೇಶದ ಶ್ರೀಶೈಲದ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ನೀರಿನ ಬಾಟಲ್‌ಗಾಗಿ ನಡೆದ ಗಲಾಟೆಯಲ್ಲಿ ಕನ್ನಡಿಗ ಸಾವಿಗೀಡಾಗಿದ್ದು 200 ಕರ್ನಾಟಕದ ವಾಹನಗಳನ್ನು ಜಖಂ ಮಾಡಿರುವ ಘಟನೆ ಕಳೆದ ರಾತ್ರಿ ಜರುಗಿದೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಜಾನಮಟ್ಟಿ ಗ್ರಾಮದ ಶ್ರೀಶೈಲ ವಾರಿಮಠ (28) ಮೃತಪಟ್ಟ ಯುವಕ

ಸ್ಥಳೀಯ ವ್ಯಾಪಾರಿಗಳು ನಡೆಸಿದ ಮಾರಾಮಾರಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು. ಗಂಭೀರ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾನೆ.

ಈ ವೇಳೆ 200 ಕ್ಕೂ ಹೆಚ್ಚು ವಾಹನಗಳನ್ನು ಧ್ವಂಸಗೊಳಿಸಲಾಗಿದೆ.
ದೇವಸ್ಥಾನದ ಆವರಣದಲ್ಲಿ ನೀರಿನ ಬಾಟಲ್‌ಗಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ.

ಆಂಧ್ರ ಮೂಲದ ವ್ಯಾಪಾರಸ್ಥರು ಹಾಗೂ ಸ್ಥಳೀಯರಿಂದ ಕರ್ನಾಟಕ ಭಕ್ತರ ಮೇಲೆ ಹಲ್ಲೆ ನಡೆದಿದೆ. ಲಾಠಿ ಹಾಗೂ ಮಾರಕಾಸ್ತ್ರ ಹಿಡಿದು ಹೊಡೆದಾಡುತ್ತಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಶ್ರೀಶೈಲಂನಲ್ಲಿ ಈಗ 144 ನೇ ಸೆಕ್ಷನ್ ಜಾರಿ ಮಾಡಲಾಗಿದೆ.

error: Content is protected !!