ಕಷ್ಟದ ದಿನಗಳನ್ನು ನೆನೆದು ಡಿ.ಕೆ.ಶಿವಕುಮಾರ್ ಕಣ್ಣೀರು ಹಾಕಿದ ಕ್ಷಣ !

Team Newsnap
2 Min Read

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಣ್ಣೀರು ಹಾಕಿದ್ದಾರೆ, ಜೈಲಿಗೆ ಹೋದ ದಿನಗಳಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ನೀಡಿದ ಬೆಂಬಲ ನೆನೆದು ಕಣ್ಣೀರು ಹಾಕಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡುವ ಸಂದರ್ಭದಲ್ಲಿ ಕಣ್ಣೀರು ಹಾಕಿ, ಸೋನಿಯಾ ಗಾಂಧಿ ಮತ್ತು ಸಿದ್ದರಾಮಯ್ಯ ಅವರ ಬೆಂಬಲವನ್ನು ನೆನೆದಿದ್ದಾರೆ.

ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟು ಮತ ಹಾಕಿದ ಕನ್ನಡಿಗರಿಗೆ ಸಾಷ್ಟಾಂಗ ನಮಸ್ಕಾರ ಎಂದರು.

ಕೆಪಿಸಿಸಿ ಅಧ್ಯಕ್ಷ. ಇದೇ ಸಂದರ್ಭದಲ್ಲಿ ತಾವು ಜೈಲಿಗೆ ಹೋದ ದಿನಗಳನ್ನು ನೆನೆದು ಡಿ.ಕೆ.ಶಿವಕುಮಾರ್ ಕಣ್ಣೀರು ಹಾಕಿದರು. ಅಲ್ಲದೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರು ನೀಡಿದ ಬೆಂಬಲವನ್ನು ನೆನೆದಿದ್ದಾರೆ ಡಿ.ಕೆ.ಶಿವಕುಮಾರ್.

ಕನಕಪುರದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಡಿ.ಕೆ.ಶಿವಕುಮಾರ್ ತಾವು ನೇರವಾಗಿ ರಾಮನಗರಕ್ಕೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಡಿಕೆ ಬ್ರದರ್ಸ್ ವಿರುದ್ಧ ಬಿಜೆಪಿ ರಣತಂತ್ರ ರೂಪಿಸಿ ಈ ಬಾರಿ ಕನಕಪುರದಲ್ಲಿ ಗೆದ್ದೇ ಗೆಲ್ಲುತ್ತೇವೆ ಎನ್ನುತ್ತಿದ್ದರು. ಆದರೆ ಕನಕಪುರ ಕಾಂಗ್ರೆಸ್ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಡಿ.ಕೆ. ಶಿವಕುಮಾರ್ ಸಾಬೀತುಪಡಿಸಿದ್ದಾರೆ.

1 ಲಕ್ಷ ಮತಗಳ ಅಂತರದ ಗೆಲುವು!

ಸತತ 7 ಗೆಲುವು ಸಾಧಿಸಿದ್ದ ಡಿ.ಕೆ.ಶಿವಕುಮಾರ್ ಸೋಲಿಸಲು ಬಿಜೆಪಿ ರಾಷ್ಟ್ರೀಯ ನಾಯಕರು ಶಪಥ ಮಾಡಿದಂತೆ ಈ ಚುನಾವಣೆ ಭಾಸವಾಗಿತ್ತು. ಆರ್.ಅಶೋಕ್ ಪದ್ಮನಾಭನಗರ ಕ್ಷೇತ್ರದ ಜತೆ ಕನಕಪುರ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಿದ್ದರು. ಮೇ 10ರಂದು ರಾಮನಗರ ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನವಾಗಿತ್ತು. ಈ ಪೈಕಿ ಕನಕಪುರ ಕ್ಷೇತ್ರದಲ್ಲಿ ಶೇ.84.52ರಷ್ಟು ವೋಟಿಂಗ್ ನಡೆದಿತ್ತು. 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಆರ್.ಅಶೋಕ್ ವಿರುದ್ಧ ಡಿ.ಕೆ.ಶಿವಕುಮಾರ್ ಗೆದ್ದು ಬೀಗಿದ್ದಾರೆ.ಸಿಎಂ ಬೊಮ್ಮಾಯಿ ತವರು ಜಿಲ್ಲೆಯೂ ಸೇರಿ 119 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ

ಡಿಕೆಶಿ ಪರ ಕನಕಪುರ ಮತದಾರರ ಬಲ

ಒಟ್ಟು 2,20,391 ಮತದಾರರನ್ನು ಹೊಂದಿರುವ ಕನಕಪುರ ಕ್ಷೇತ್ರದಲ್ಲಿ 1,09, 876 ಪುರುಷರು, 1,10,500 ಮಹಿಳಾ ಮತದಾರದ್ದರೆ, ಜಾತಿ ಲೆಕ್ಕಾಚಾರದಲ್ಲಿ ಒಕ್ಕಲಿಗರ 99,567 ವೋಟ್ ಇಲ್ಲಿದೆ. ದಲಿತ ಸಮುದಾಯದ 44 ಸಾವಿರ ಮತಗಳು, ಮುಸ್ಲಿಮರ 22,500, ಲಿಂಗಾಯತರ 18,500 ಮತಗಳು ಇವೆ. ಇನ್ನುಳಿದಂತೆ ಕುರುಬರು 5,600, ತಿಗಳರು 10,500, ಕ್ರೈಸ್ತರು 2,507, ಬೆಸ್ತರು 6000 & ಇತರೆ ಸಮುದಾಯದ 9400 ಮತದಾರರಿದ್ದರು. ಈ ಪೈಕಿ ಕನಕಪುರ ಮತದಾರರು ಮತ್ತೆ ಡಿಕೆಶಿಗೆ ಆಶೀರ್ವಾದ ಮಾಡಿದ್ದಾರೆ.

Share This Article
Leave a comment