September 26, 2021

Newsnap Kannada

The World at your finger tips!

ಮುಂದಿನ ಚುನಾವಣೆ ಇನ್ನೂ ದೂರ ಇದೆ: ಶೆಟ್ಟರ್

Spread the love

ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದರುವುದು ಒಳ್ಳೆಯ ಸಂಗತಿ. ಆದರೆ ಮುಂದಿನ ಚುನಾವಣೆ ಇನ್ನೂ ದೂರ ಇದೆ ಎಂದವರು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್.


ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕುಟುಂಬದವರ ಸಮೇತ ಬಂದು ಮತದಾನ ಮಾಡಿದ ನಂತರ ಅವರು ವರದಿಗಾರರೊಂದಿಗೆ ಮಾತನಾಡಿದರು. ಪಕ್ಷದ ತೀರ್ಮಾನದಂತೆ ನಾವು ಮುಂದುವರೆಯುತ್ತೇವೆ ಎಂದರು.


ದಾವಣಗೆರೆಯಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಭಾಗವಹಿಸಿದ್ದ ಅಮಿತ್ ಶಾ, ಮುಂದಿನ ವಿಧಾನಸಭಾ ಚುನಾವಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಸಲಾಗುವುದು ಎಂದು ಪ್ರಕಟಿಸಿದ್ದರು.


ಸರ್ಕಾರದಲ್ಲಿ ಹಿರಿಯರನ್ನು ನಿರ್ಲಕ್ಷಿಸಲಾಗಿದೆ ಎಂಬ ಕುರಿತು ಈಗಾಗಲೇ ಪಕ್ಷದ ಮುಖಂಡರ ಜತೆ ಚರ್ಚೆ ನಡೆಸಲಾಗಿದೆ ಎಂದೂ ಶೆಟ್ಟರ್ ಇದೇ ಸಂದರ್ಭದಲ್ಲಿ ತಮ್ಮ ಮನದಾಳದ ಮಾತೊಂದನ್ನು ಹೊರಗೆಡವಿದರು.


ಟಿಕೆಟ್ ಆಕಾಂಕ್ಷಿಗಳ ನಡುವೆ ಪೈಪೋಟಿ ಇತ್ತು. ಕೆಲ ಕಡೆ ಬಂಡಾಯಗಾರರೂ ಸ್ಪರ್ಧೆ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಬಂಡಾಯಗಾರರಿಗೆ ಬೆಂಬಲ ನೀಡಿಲ್ಲ. ಅವರು ಚುನಾವಣೆಯಲ್ಲಿ ಗೆಲ್ಲುವುದೂ ಇಲ್ಲ ಎಂದು ಭವಿಷ್ಯ ನುಡಿದರು.

error: Content is protected !!