ಹಾಸನ : ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ಪತ್ನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಹಾಸನದ ಎಸ್ ಪಿ ಕಚೇರಿ ಆವರಣದಲ್ಲಿ ನಡೆದಿದೆ.
ನಗರದ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಲೋಕನಾಥ್ ಹಾಸನದ ಎಸ್ ಪಿ ಕಚೇರಿ ಎದುರಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದು, ಪೊಲೀಸರು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡ ಪತ್ನಿ ಮಮತಾರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕೆ ಆರ್ ಎಸ್ ಗೆ 9 ಸಾವಿರ ಕ್ಯುಸೆಕ್ ಒಳಹರಿವು – 95.50 ಅಡಿ ನೀರು – ಕಬಿನಿಗೆ ಭರ್ತಿಗೆ 7 ಅಡಿ ಬಾಕಿ
ಮಮತಾ ಹಾಗೂ ಲೋಕನಾಥ್ ನಡುವೆ ಕಳೆದ ನಾಲ್ಕೈದು ದಿನಗಳಿಂದ ಜಗಳ ನಡೆಯುತ್ತಿದ್ದು ,ಎಸ್ ಪಿ ಕಚೇರಿಗೆ ದೂರು ನೀಡಲು ಬಂದ ಪತ್ನಿ ಮಮತಾಗೆ ಲೋಕನಾಥ್ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ನಡೆದಿದೆ.
More Stories
ಮೈಸೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಮಾರ್ಗಸೂಚಿ ಜಾರಿ
KSDL ನೌಕರ ಕೈಯಲ್ಲಿ ಡೆತ್ ನೋಟ್ ಹಿಡಿದು ಆತ್ಮಹತ್ಯೆ: ಕೆಲಸದ ಒತ್ತಡವೇ ಕಾರಣ?
ಕೆಎಎಸ್ , ಸರ್ಕಾರಿ ಉದ್ಯೋಗ ಪಾಸ್ ಮಾಡಿಸೋ ಹೆಸರಿನಲ್ಲಿ ಲಕ್ಷಾಂತರ ವಂಚನೆ: ಆರೋಪಿ ಬಂಧನ