ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದ್ದು, ರಾಜ್ಯದಲ್ಲಿಯೂ ತೆರಿಗೆ ಕಡಿತ ಕುರಿತು ಪರಿಶೀಲನೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಮೂಲಕ ರಾಜ್ಯದಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳ್ಳಲಿದೆ ಎಂಬ ಮಾಹಿತಿಯನ್ನು ಮುಖ್ಯಮಂತ್ರಿ ನೀಡಿದ್ದಾರೆ.
ದಾವೋಸ್ ಪ್ರವಾಸಕ್ಕೆ ತೆರಳುವ ಮುನ್ನ ಆರ್.ಟಿ.ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಈ ಹಿಂದೆಯೂ ಕೇಂದ್ರ ಸರ್ಕಾರ ತೈಲದ ಮೇಲಿನ ಸುಂಕ ಕಡಿತಗೊಳಿಸಿದಾಗ ರಾಜ್ಯ ಸರ್ಕಾರ ತೆರಿಗೆ ಕಡಿತಗೊಳಿಸಿತ್ತು. ಹಾಗಾಗಿ ಈ ಬಾರಿಯೂ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವ ಆಶ್ವಾಸನೆ ನೀಡಿದರು.
ಇಂದು ಸ್ವಿಟ್ಜರ್‍ಲೆಂಡ್‍ನ ದಾವೋಸ್‍ಗೆ ತೆರಳುತ್ತಿದ್ದು, ನಾಳೆ ಮತ್ತು 24ರಂದು ನಡೆಯಲಿರುವ ವಿಶ್ವ ಆರ್ಥಿಕ ಶೃಂಗದಲ್ಲಿ ಭಾಗಿಯಾಗುತ್ತೇನೆ. ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗುವೆ. ಹೂಡಿಕೆದಾರರನ್ನು ಸೆಳೆಯಲು ಪ್ರಯತ್ನ ನಡೆಸಲಾಗುತ್ತದೆ ಎಂದು ಹೇಳಿದರು.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
More Stories
ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್