ಗ್ರಾ.ಪಂ ಅಧ್ಯಕ್ಷರ ಅಧಿಕಾರ ಮೊಟಕಿಲ್ಲ: ಪ್ರಸ್ತಾವನೆಗೆ ಸಿಎಂ ಬೊಮ್ಮಾಯಿ ತಿರಸ್ಕಾರ

Team Newsnap
1 Min Read
Congress leaders who day dream of power - CM ಅಧಿಕಾರದ ಹಗಲು ಕನಸು ಕಾಣುವ ಕಾಂಗ್ರೆಸ್ ನಾಯಕರು - ಸಿಎಂ

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಒಗಳಿಗೆ ಅಧಿಕಾರ ನೀಡುವ ಅಧಿಕಾರಿಗಳ ಪ್ರಸ್ತಾವನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ.

ಗೃಹ ಸಚಿವ ಅರಗಜ್ಞಾನೇಂದ್ರ ಈ ಮಾಹಿತಿ ನೀಡಿ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದಿಲ್ಲ. .ಪಂಚಾಯಿತಿ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿವೆ, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ ಎಂದರು. ‘ಮಹಾಕಾಳೇಶ್ವರ ಕಾರಿಡಾರ್’ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯಿತಿ ರಾಜ್ ಅಧಿನಿಯಮ 1993 ಕ್ಕೆ ತಿದ್ದುಪಡಿ ತಂದು ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಮೊಟಕುಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಸಭೆ ತೀರ್ಮಾನ ಕೈಗೊಂಡಿತ್ತು.

Share This Article
Leave a comment