ಹಿಜಬ್ ವಿವಾದದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಲಾಗಿದೆ.
ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಕ್ಟಿಕಲ್ ಪರೀಕ್ಷೆಯನ್ನು ಮುಂದೂಡಲಾಗಿದೆ.
ಇಂದು ದ್ವಿತೀಯ ಪಿಯುಸಿ ಲ್ಯಾಬ್ ಪರೀಕ್ಷೆಗಳು ಆರಂಭವಾಗಬೇಕಿತ್ತು. ಸುಮಾರು ಇಪ್ಪತ್ತಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಇರುವ ತರಗತಿಯಲ್ಲಿ ಯಾವುದೇ ಗೊಂದಲದ ವಾತಾವರಣ ನಿರ್ಮಾಣ ಆಗಬಾರದೆಂಬ ಉದ್ದೇಶದಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟಿಸುವುದಾಗಿ ಹೇಳಿರುವ ಎಂಜಿಎಂ ಕಾಲೇಜು ತಿಳಿಸಿದೆ.
ಫೆಬ್ರವರಿ 7ರಂದು ಎಂಜಿಎಂ ಕಾಲೇಜಿನಲ್ಲಿ ಕೇಸರಿ ಹಿಜಬ್ ಫೈಟ್ ನಡೆದಿತ್ತು. ಇದೀಗ ರಾಜ್ಯಾದ್ಯಂತ ಹಿಜಬ್ ಪ್ರತಿಭಟನೆ ನಡೆಯುತ್ತಿದ್ದು, ಹೈಕೋರ್ಟ್ ತನ್ನ ಮುಂದಿನ ಆದೇಶದವರೆಗೂ ಶಾಲಾ, ಕಾಲೇಜುಗಳಿಗೆ ಹಿಜಬ್ ಧರಿಸದೇ ವಿದ್ಯಾರ್ಥಿನಿಯರು ಹಾಜರಾಗಬೇಕೆಂದು ಸೂಚಿಸಿದೆ. ಆದರೂ ವಿದ್ಯಾರ್ಥಿನಿಯರು ಕೋರ್ಟ್ ಆದೇಶಕ್ಕೆ ಕೇರ್ ಮಾಡದೇ ಹಿಜಬ್ ಧರಿಸಿಯೇ ತರಗತಿಗೆ ಹಾಜರಾಗುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು