ಸ್ಪಂದನಾ ಮೃತದೇಹ ಹಸ್ತಾಂತರ ಪ್ರಕ್ರಿಯೆ ಪೂರ್ಣ

Team Newsnap
2 Min Read

ಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದೆ. ಮರಣೋತ್ತರ ಪರೀಕ್ಷೆ ವರದಿ ಬರುತ್ತಿದ್ದಂತೆಯೇ ಸ್ಪಂದನಾ ಅವರ ಮೃತದೇಹವನ್ನು ಬೆಂಗಳೂರಿಗೆ ತರುವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ರಾತ್ರಿ 8.30ರ ಹೊತ್ತಿಗೆ ಮೃತದೇಹ ಹೊತ್ತ ವಿಮಾನ ಬ್ಯಾಂಕಾಕ್ ನಿಂದ ಹೊರಟರೆ, 11.15ಕ್ಕೆ ಬೆಂಗಳೂರು ತಲುಪಲಿದೆ.

ಮರಣೋತ್ತರ ಪರೀಕ್ಷೆಯ ನಂತರದ ಪ್ರಕ್ರಿಯೆಗಳು

ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಸೋಮವಾರ ಬೆಳಗ್ಗೆ ಬ್ಯಾಂಕಾಕ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿದೇಶದಲ್ಲಿ ಯಾವುದೇ ಪ್ರಜೆ ನಿಧನ ಹೊಂದಿದರೂ, ಅವರ ಮೃತದೇಹ ತರುವುದು ಸುಲಭವಲ್ಲ. ಅದರಲ್ಲೂ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ನಿಧನ ಹೊಂದಿದರೆ ಪ್ರಕ್ರಿಯೆ ಇನ್ನೂ ಕಠಿಣವಾಗಿರುತ್ತದೆ.

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಪ್ರವಾಸಕ್ಕೆಂದು ಬಂದು ಮೃತರಾದ ವ್ಯಕ್ತಿಗಳ ಮರಣೋತ್ತರ ಪರೀಕ್ಷೆ ತಡವಾಗುವುದು ಸಾಮಾನ್ಯ. ಭಾರತದಂತೆಯೇ ಅಲ್ಲಿಯೂ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ.

ಆ ವರದಿಯನ್ನು ಮೊದಲು ಪೊಲೀಸರು ಪಡೆದುಕೊಳ್ಳುತ್ತಾರೆ.ಪೊಲೀಸರಿಗೆ ಮರಣೋತ್ತರ ವರದಿ ಬಂದ ತಕ್ಷಣವೇ ಪರಿಶೀಲಿಸಿ ಅದು ಸಹಜ ಸಾವು ಅಂದ ಬಳಿಕವಷ್ಟೇ ಕುಟುಂಬಸ್ಥರಿಗೆ ಮೃತದೇಹವನ್ನು ನೀಡಲಾಗುತ್ತದೆ. ನಂತರ ಕುಟುಂಬದವರು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುತ್ತಾರೆ.

ಮರಣೋತ್ತರ ವರದಿ, ಮರಣ ಪ್ರಮಾಣ ಪತ್ರ ಹಾಗೂ ಪೊಲೀಸ್ ವರದಿಗಳನ್ನು ಪಡೆದುಕೊಂಡು ಆಯಾ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಬೇಕಾಗುತ್ತದೆ.

ಸ್ಪಂದನಾ ಬ್ಯಾಂಕಾಕ್ ನಲ್ಲಿ ನಿಧನರಾಗಿದ್ದರಿಂದ ಅವರ ಕುಟುಂಬವು ಈ ಎಲ್ಲ ವರದಿಗಳನ್ನು ಪಡೆದುಕೊಂಡು ಬ್ಯಾಂಕಾಕ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ನೀಡಬೇಕು. ರಾಯಭಾರಿ ಕಚೇರಿ ಮತ್ತು ಸ್ಥಳೀಯ ಆಡಳಿತ ಸೇರಿಕೊಂಡು ಕಸ್ಟಮ್ಸ್ ಕ್ಲಿಯರೆನ್ಸ್ ಪಡೆದುಕೊಳ್ಳಲಾಗುತ್ತದೆ.ಸ್ಪಂದನಾ ಅವರ ಪಾಸ್ ಪೋರ್ಟ್ ಮತ್ತೆ ವೀಸಾವನ್ನು ವಾಪಸ್‌ ಪಡೆದುಕೊಳ್ಳಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಗಿದ ನಂತರವಷ್ಟೇ ಮೃತದೇಹವನ್ನು ವಿಮಾನ ನಿಲ್ದಾಣಕ್ಕೆ ತೆಗೆದುಕೊಂಡು ಹೋಗಲು ಅನುಮತಿಸಲಾಗುತ್ತದೆ.ಇದನ್ನು ಓದಿ –ಕೃಷಿ ಸಚಿವರ ಲಂಚ ಬೇಡಿಕೆ ಪ್ರಕರಣ – ಸಿಐಡಿ ತನಿಖೆಗೆ- ಸಿಎಂ ಸಿದ್ದು ಪ್ರಕಟ

ಏರ್‌ಪೋರ್ಟ್‌ಲ್ಲೂ ಹಲವು ಪ್ರಕ್ರಿಯೆಗಳು ನಡೆಯಲಿವೆ. ರಾಯಭಾರಿ ಕಚೇರಿಯಿಂದ ಪಡೆದಿರುವಂತಹ ಎಲ್ಲ ವರದಿಗಳನ್ನೂ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ನೀಡಬೇಕು. ನಂತರವಷ್ಟೇ ಮೃತದೇಹವನ್ನು ವಿಮಾನದಲ್ಲಿ ಸಾಗಿಸಲು ಪರವಾನಿಗೆ ದೊರೆಯುತ್ತದೆ.

Share This Article
Leave a comment