ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯ ಪೊಲೀಸ್ ಇಲಾಖೆಯ ಎಸ್ ಐ ಗಿಂತ ಕೆಳ ಹಂತದ ಪೊಲೀಸರು ಮತ್ತು ಆಡಳಿತ ಸಿಬ್ಬಂದಿಯ ಅಂತರ್ ಜಿಲ್ಲೆ ಘಟಕ ಹಾಗೂ ವಲಯ ವರ್ಗಾವಣೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ನಿಯಮಾನುಸಾರ ಇಂದಿನಿಂದ ವರ್ಗಾವಣೆ ಪ್ರಕ್ರಿಯೆ ನಡೆಸುವಂತೆ ಡಿಜಿಪಿ ಪ್ರವೀಣ್ ಸೂದ್ ಆದೇಶಿಸಿದ್ದಾರೆ. ಪೊಲೀಸರ ಅಂತರ ಜಿಲ್ಲಾ ಘಟಕ ವರ್ಗಾವಣೆಗೆ ಸಚಿವ ಸಂಪುಟದ ಅನುಮೋದನೆ ಬೆನ್ನಲ್ಲೇ ರಾಜ್ಯ ಸರ್ಕಾರವು ವರ್ಗಾವಣೆ ಅಧಿಸೂಚನೆ ಹೊರಡಿಸಿದೆ.
ಸಬ್ ಇನ್ಸ್ ಪೆಕ್ಟರ್, ಸಹಾಯಕ ಸಬ್ ಇನ್ಸ್ ಪೆಕ್ಟರ್, ಹೆಡ್ ಕಾನ್ ಸ್ಟೇಬಲ್, ಕಾನ್ ಸ್ಟೇಬಲ್, ಪ್ರಥಮ ದರ್ಜೆ ಸಹಾಯಕ ಹಾಗೂ ದಲಾಯತ್ ಗಳ ಅಂತರ್ ಜಿಲ್ಲೆ, ಘಟಕ, ಕಮಿಷನರೇಟ್ ಹಾಗೂ ವಲಯವಾರು ವರ್ಗಾವಣೆಗೆ ಆಯಾ ವಿಭಾಗದ ಮುಖ್ಯಸ್ಥರಿಗೆ ಅಧಿಕಾರ ನೀಡಲಾಗಿದೆ. ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಮಾ.5 ರಂದು ಕಾಂಗ್ರೆಸ್‍ಗೆ ಸೇರ್ಪಡೆ
1977 ರಿಂದ ಅಂತರ ಜಿಲ್ಲಾ ವರ್ಗಾವಣೆಗೆ ಇದ್ದ ನಿಯಮಗಳನ್ನು 2021 ರಲ್ಲಿ ನಾಗರಿಕ ಸೇವಾ ನಿಯಮಾವಳಿಗೆ ತಿದ್ದುಪಡಿ ತಂದು ರಾಜ್ಯ ಸರ್ಕಾರವು ರದ್ದುಗೊಳಿಸಿತ್ತು. ನಂತರ ಪೊಲೀಸರಿಂದ ಆಕ್ಷೇಪಗಳು ವ್ಯಕ್ತವಾಗಿದ್ದವು. ಹೀಗಾಗಿ ರಾಜ್ಯ ಸರ್ಕಾರವು ಮತ್ತೆ ಹಳೇ ನಿಯಮ ಜಾರಿ ಮಾಡಿ ಆದೇಶ ಹೊರಡಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು