PSI ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಕ್ಕೆ ಪ್ರಕರಣದಲ್ಲಿ ಭಾಗಿಯಾಗಿರುವ ಕಿಂಗ್‌ಪಿನ್ ಗಳು ಬ್ಲೂಟೂತ್ ಮೂಲಕ ಆರೋಪಿತ ಅಭ್ಯರ್ಥಿಗಳಿಗೆ ಉತ್ತರ ರವಾನಿಸಿ ಅಕ್ರಮ ಎಸಗಿರುವ ಮತ್ತೊಂದು ಸ್ಫೋಟಕ ಅಂಶ ಬಯಲಾಗಿದೆ.
ಮುನ್ನಾಭಾಯ್ MBBS ಸಿನಿಮಾ ಮಾದರಿಯಲ್ಲಿ ಬ್ಲೂಟೂತ್ ಮೂಲಕ ಉತ್ತರ ರವಾನಿಸಿದ್ದಾರೆ.
ಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಲೀಕ್ ಆಗಿರುವ ಮಾಹಿತಿ ಬಹಿರಂಗಗೊಂಡಿದೆ. ಲೀಕ್ ಆದ ಪ್ರಶ್ನೆಪತ್ರಿಕೆಯ ಉತ್ತರಗಳನ್ನು ಸಿದ್ಧಪಡಿಸಿಕೊಂಡಿದ್ದ ಆರೋಪಿಗಳು ಹಣ ಕೊಟ್ಟು ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ರವಾನೆ ಮಾಡಿಸಿದ್ದಾರೆ.
ದಾಳಿ ನಡೆಸಿರುವ ಅಧಿಕಾರಿಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ಲಭ್ಯವಾಗಿದೆ ಆರೋಪಿಗಳ ಎಟಿಎಂ ಕಾರ್ಡ್‌ಗಳು ಸಹ ದೊರೆತಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಉತ್ತರ ನೀಡಲಾಗಿದೆ ಹಣಕೊಟ್ಟ ಅಭ್ಯರ್ಥಿಗಳಿಗೆ A-B-C-D ಮಾದರಿ ಪ್ರಶ್ನೆಪತ್ರಿಕೆಗಳಂತೆ ಒಂದೇ ಬಾರಿಗೆ ಉತ್ತರ ಹೇಳಿಕೊಟ್ಟಿದ್ದಾರೆ. ಇದೀಗ ಪ್ರಶ್ನೆ ಪತ್ರಿಕೆಗೆ ಉತ್ತರ ಕೊಡುವ ವೀಡಿಯೋ ವೈರಲ್ ಆಗಿದೆ.
ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಸದ್ಯದಲ್ಲೇ ಬಂಧಿಸಿ ಪ್ರಕರಣಗಳ ಸತ್ಯಾಸತ್ಯತೆ ತಿಳಿದುಕೊಳ್ಳುವ ನಿಟ್ಟಿನಲ್ಲಿ ಸಿಐಡಿ ತನಿಖೆ ಮುಂದುವರೆದಿದೆ.
More Stories
ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ಪ್ರಕಟ
ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆ ಕಮೀಷನರ್ ನೇಮಕ
ರಾಜ್ಯ ಸರ್ಕಾರದಿಂದ 11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ