ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ

Team Newsnap
1 Min Read
  • ಕೆಲವೇ ತಿಂಗಳ ಅಂತರದಲ್ಲಿ ರಾಜೀನಾಮೆ ನೀಡಿದ ಬಿಜೆಪಿಯ 4 ನೇ ಸಿಎಂ
  • 2022 ರ ಡಿಸೆಂಬರ್ ಗೆ ಗುಜರಾತ್ ಚುನಾವಣೆ; ಬಿಜೆಪಿ ನಾಯಕತ್ವ ಬದಲಾವಣೆಗೆ ಮುನ್ನುಡಿ

ವರಿಷ್ಠ ರ ಆಶಯದಂತೆ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ಶನಿವಾರ‌ ದಿಢೀರ್ ರಾಜೀನಾಮೆ ನೀಡಿದ್ದಾರೆ.

2016 ಆಗಸ್ಟ್‌ 7 ರಂದು ಅಧಿಕಾರ ವಹಿಸಿಕೊಂಡಿದ್ದ ರೂಪಾನಿ
ಇಂದು ಮಧ್ಯಾಹ್ನ ರಾಜ್ಯಪಾಲರ ನಿವಾಸಕ್ಕೆ ತೆರಳಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯದಲ್ಲಿ ಮುಂದಿನ ವರ್ಷ ಅಂದರೆ ಡಿಸೆಂಬರ್ 2022ರ ಡಿಸೆಂಬರ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರೂಪಾನಿ ರಾಜೀನಾಮೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ರಾಜೀನಾಮೆ ಬಳಿಕ ಮಾತನಾಡಿದ ವಿಜಯ್ ರೂಪಾನಿ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ.

ಗುಜರಾತ್ ಪ್ರಗತಿಗೆ ಹೊಸ ನಾಯಕತ್ವ ?

ಗುಜರಾತ್ ಪ್ರಗತಿಗೆ ಹೊಸ ನಾಯಕತ್ವ ಬರಬೇಕೆಂದು ನಾನು ನಂಬುತ್ತೇನೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಪಕ್ಷಕ್ಕಾಗಿ ನನ್ನ ಕೆಲಸ : ರೂಪಾನಿ :

ಬಿಜೆಪಿ ಸಿದ್ಧಾಂತ ಆಧರಿತ ಪಕ್ಷ, ಹೈಕಮಾಂಡ್ ಆದೇಶದಂತೆ ನಮ್ಮ ಪಕ್ಷದ ಕಾರ್ಯಕರ್ತರ ಉದ್ದೇಶಗಳು ಬದಲಾಗುತ್ತಿರುವುದು ಸಂಪ್ರದಾಯವಾಗಿದೆ. ಬಿಜೆಪಿ ಕಾರ್ಯಕರ್ತನಾಗಿ ನನ್ನ ಕೆಲಸವನ್ನು ಮುಂದುವರಿಸುತ್ತೇನೆ ಎಂದು ರೂಪಾನಿಯವರು ಹೇಳಿದ್ದಾರೆ.

ವಿಜಯ್ ರೂಪಾನಿಯವರ ರಾಜೀನಾಮೆಗೆ ನಿಖರ ಕಾರಣ ಏನೆಂಬುದು ಸ್ಪಷ್ಟವಾಗಿಲ್ಲ. ಇತ್ತೀಚೆಗೆ ರಾಜೀನಾಮೆ ನೀಡಿದ ಬಿಜೆಪಿ ಮುಖ್ಯಮಂತ್ರಿಗಳ ಪೈಕಿ ವಿಜಯ್ ರೂಪಾನಿಯವರು ನಾಲ್ಕನೇಯವರಾಗಿದ್ದಾರೆ. ಜುಲೈನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಅಲ್ಲದೆ ತ್ರಿವೇಂದ್ರ ರಾವತ್ ಅವರನ್ನು ಬದಲಾಯಿಸಿದ ನಾಲ್ಕು ತಿಂಗಳ ಬಳಿಕ ತಿರಾತ್ ಸಿಂಗ್ ರಾವತ್ ಉತ್ತರಾಖಂಡ್‍ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Share This Article
Leave a comment