ರಾಜ್ಯದಲ್ಲಿ ಸೈಬರ್ ಸುರಕ್ಷತಾ ಕಾರ್ಯನೀತಿಯನ್ನು ರೂಪಿಸಲು ಸರ್ಕಾರ ಮುಂದಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಕ್ಟೋಬರ್ ತಿಂಗಳನ್ನು ಸೈಬರ್ ಸುರಕ್ಷತಾ ಮಾಸವನ್ನಾಗಿ ಆಚರಿಸಲಾಗುತ್ತಿದೆ. ಸೋಮವಾರ ವಿಧಾನ ಸೌಧದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸೈಬರ್ ಸುರಕ್ಷತಾ ಲಾಂಛನಗಳನ್ನು ಅನಾವರಣಗೊಳಿಸಿ ಡಿಸಿಎಂ ಅಶ್ವತ್ಥ ನಾರಾಯಣ ಮಾತನಾಡಿದರು.
ಸಾರ್ವಜನಿಕ ಸೇವೆಯನ್ನು ಜನರಿಗೆ ತಲುಪಿಸುವುದಕ್ಕಾಗಿ ಮಾಹಿತಿ ತಂತ್ರಜ್ಞಾನ (ಐಟಿ) ಆಧಾರಿತ ತಂತ್ರೋಪಾಯಗಳ ಅಳವಡಿಕೆ ದಿನಗಳೆದಂತೆ ಹೆಚ್ಚಾಗುತ್ತಿದೆ. ಇದರೊಟ್ಟಿಗೆ ಸೈಬರ್ ಅಪಾಯಗಳು ಕೂಡ ಗಣನೀಯವಾಗಿ ಅಧಿಕವಾಗುವ ಅಪಾಯ ಇದೆ. ನಾಗರಿಕರು, ಉದ್ಯಮಗಳು, ವಿದ್ಯಾರ್ಥಿಗಳು ಹಾಗೂ ಸರ್ಕಾರವನ್ನು ಗಮನದಹಮ್ಮಿಕೊಳ್ಳಲಾಗುತ್ತದೆ. ಸುರಕ್ಷತಾ ಕಾರ್ಯನೀತಿ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಅಮೆರಿಕದ ಎಫ್ ಬಿಐ ವರದಿ ಪ್ರಕಾರ, ಕೊರೋನಾ ಪಿಡುಗಿನ ನಂತರದ ಅವಧಿಯಲ್ಲಿ ಸೈಬರ್ ದುಷ್ಕೃತ್ಯಕ್ಕೆ ಸಂಬಂಧಿಸಿದ ದೂರುಗಳ ಸಂಖ್ಯೆಯಲ್ಲಿ ಶೇ 400ರಷ್ಟು ಹೆಚ್ಚಳವಾಗಿದೆ. ಈ ತನಿಖಾ ಸಂಸ್ಥೆಗೆ ಪ್ರತಿ ದಿನ 4000 ದೂರುಗಳು ಬರುತ್ತಿವೆ. ದುಷ್ಕರ್ಮಿಗಳು ಫಿಷಿಂಗ್, ರಾನ್ಸಮ್ ವೇರ್ ಮತ್ತು ಮಾಲ್ವೇರ್ ದಾಳಿಗಳ ಮೂಲಕ ಸುಲಿಗೆ ಮಾಡುತ್ತಿದ್ದಾರೆ. ಸೈಬರ್ ಕ್ರಿಮಿನಲ್ ಗಳು ಕೊರೋನಾ ಸಂತ್ರಸ್ತರಿಗೆ ನೆರವು ನೀಡುವ ನೆಪದಲ್ಲಿ ಸಂಬಂಧಿಸಿದಂತೆ ಸಾವಿರಾರು ವಂಚಕ ಪೋರ್ಟಲ್ ಗಳನ್ನು ಆರಂಭಿಸಿದ್ದಾರೆ ಎಂದು ಅಶ್ವತ್ಥ ನಾರಾಯಣ ವಿವರಿಸಿದರು.
ಭಾರತದ ಸಿಲಿಕಾನ್ ಕಣಿವೆ ಎಂದೇ ಹೆಸರಾಗಿರುವ ಬೆಂಗಳೂರು ಸಹಜವಾಗಿಯೇ ಸೈಬರ್ ಕ್ರಿಮಿನಲ್ ಗಳ ಮುಖ್ಯ ಗುರಿಗಳಲ್ಲಿ ಒಂದಾಗಿದೆ. ಆದ್ದರಿಂದ ಸರ್ಕಾರ ಹಾಗೂ ಸಂಸ್ಥೆಗಳಿಗೆ ಸೈಬರ್ ಜಾಗೃತಿ ಮೂಡಿಸಿಕೊಳ್ಳುವುದು ಅತ್ಯಂತ ಪ್ರಮುಖವಾಗಿ ಪರಿಣಮಿಸಿದೆ. ಯಾವುದೇ ಸಂಸ್ಥೆಯಲ್ಲಿ ಸೈಬರ್ ಅರಿವು ಇರುವ ಉದ್ಯೋಗಿಗಳೇ ಸೈಬರ್ ಅಪಾಯದ ವಿರುದ್ಧ ಅತ್ಯುತ್ತಮ ರಕ್ಷಕರಾಗಿರುತ್ತಾರೆ. ಇದನ್ನು ಗಮನದಲ್ಲಿರಿಸಿಕೊಂಡು ಜಾಗತಿಕವಾಗಿ ಅಕ್ಟೋಬರ್ ತಿಂಗಳನ್ನು ಸೈಬರ್ ಸುರಕ್ಷತಾ ಮಾಸವನ್ನಾಗಿ ಆಚರಿಸಲಾಗುತ್ತಿದೆ. ಅದಕ್ಕನುಗುಣವಾಗಿ ಕರ್ನಾಟಕದಲ್ಲಿಯೂ ಈ ಬಾರಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ. ಎಂದರು.
ಆನ್ ಲೈನ್ ವೇದಿಕೆ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಷ್ಟ್ರೀಯ ಸೈಬರ್ ಸುರಕ್ಷತಾ ಸಂಚಾಲಕ ಲೆಫ್ಟಿನೆಂಟ್ ಜನರಲ್ ರಾಜೇಶ್ ಪಂತ್ ಪ್ರಧಾನ ಭಾಷಣ ಮಾಡಿದರು. ಸೈಬರ್ ಸುರಕ್ಷತೆಯ ಪ್ರಾಮುಖ್ಯ ಹಾಗೂ ಭಾರತದ ಮಹತ್ವದ ಮಾಹಿತಿ ತಂತ್ರಜ್ಞಾನ ಮೂಲಸೌಕರ್ಯಕ್ಕೆ ಇರುವ ಭೀತಿಗಳ ಕುರಿತು ಅವರು ಪ್ರಸ್ತಾಪಿಸಿದರು.
ಬೆಂಗಳೂರು ಭಾರತೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಹಾಗೂ ಸೈಸೆಕ್ ತಾಂತ್ರಿಕ ಸಮಿತಿ ಸಂಚಾಲಕ ಪ್ರೊ.ನರಹರಿ ಸರ್ಕಾರಿ ಉದ್ಯೋಗಿಗಳು ಹಾಗೂ ಅಧಿಕಾರಿಗಳಿಗೆ ಸೈಬರ್ ಜಾಗೃತಿ ಅಗತ್ಯದ ಬಗ್ಗೆ ಮಾತನಾಡಿದರು.
ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಸಿಐಡಿ-ಸೈಬರ್ ಅಪರಾಧ ಇಲಾಖೆಯ ಹೆಚ್ಚುವರಿ ಡಿಜಿಪಿ ಉಮೇಶ್ ಕುಮಾರ್, ಕರ್ನಾಟಕ ಮಾಹಿತಿ ತಂತ್ರಜ್ಞಾನ ದೂರದರ್ಶಿತ್ವ ತಂಡದ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕ ನಾವೀನ್ಯತಾ ಮತ್ತು ತಂತ್ರಜ್ಞಾನ ಸಂಸ್ಥೆಯ (ಕಿಟ್ಸ್) ವ್ಯವಸ್ಥಾಪಕ ನಿರ್ದೇಶಕಿ ಮೀನಾ ನಾಗರಾಜ್ ಅವರು ಸಮಾರೋಪ ನುಡಿಗಳನ್ನು ಆಡಿದರು.
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು