December 23, 2024

Newsnap Kannada

The World at your finger tips!

son father

ತಂದೆಯ ಅಂತ್ಯ ಸಂಸ್ಕಾರದ ವೇಳೆ ಮಗನೂ ಹೃದಯಾಘಾತದಿಂದ ಸಾವು

Spread the love

ಕೊವೀಡ್​​ಗೆ ಬಲಿಯಾದ ತಂದೆಯ ಅಂತ್ಯಸಂಸ್ಕಾರದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಮಗನೂ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ಜರುಗಿದೆ

ಬೈಲುಗುತ್ತು ಕೊಪ್ಪಳ ನಿವಾಸಿ ನಿವೃತ್ತ ಪ್ರೊಫೆಸರ್ ಭುಜಂಗ ಶೆಟ್ಟಿಯವರಿಗೆ ಇತ್ತೀಚಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಮೃತಪಟ್ಟಿದ್ದರು.

ಬುಧವಾರ ಅಂತ್ಯಸಂಸ್ಕಾರದ ವಿಧಿ ವಿಧಾನಗಳು ಪುಣಚದ ಮನೆಯಲ್ಲಿ ಕೊವೀಡ್ ನಿಯಾಮಾವಳಿಯಂತೆ ನಡೆಸಲಾಗುತ್ತಿತ್ತು. ಈ ಸಂದರ್ಭ ಅವರ ಪುತ್ರ ಶೈಲೇಶ್ ಭಾಗಿಯಾಗಿದ್ದರು. ಅಂತಿಮ ಸಂಸ್ಕಾರದ ಪ್ರಕ್ರಿಯೆಗಳು ನಡೆಯುತ್ತಿರುವಾಗಲೇ ಶೈಲೇಶ್ ಆರೋಗ್ಯದಲ್ಲಿ ಏರುಪೇರು ಆಯಿತು.‌

ಮೃತ ಶೈಲೇಶ್ ವಿದೇಶದಲ್ಲಿ ಉದ್ಯೋಗದಲ್ಲಿದ್ದೂ ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಮೃತ ಶೈಲೇಶ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!