- 10 ಲಕ್ಷ ಡೋಸ್ ಬೆಂಗಳೂರಿಗೆ, 5 ಲಕ್ಷ ಡೋಸ್ ಬೆಳಗಾವಿಗೆ
ರಾಜ್ಯಕ್ಕೆ ಕೇಂದ್ರ ಸರ್ಕಾರವು 15 ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕೆ ಡೋಸ್ ನೀಡಿದ್ದು, ಮತ್ತಷ್ಟು ಜನರು ಲಸಿಕೆ ಪಡೆಯಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ನಿನ್ನೆವರೆಗೆ 46,02,000 ಮಂದಿಗೆ ಲಸಿಕೆ ನೀಡಲಾಗಿದೆ. 12 ಲಸಿಕೆ ರಾಜ್ಯದಲ್ಲಿತ್ತು. ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಮಾತುಕತೆ ನಡೆಸಿದ ಬಳಿಕ 15 ಲಕ್ಷಕ್ಕೂ ಹೆಚ್ಚು ಲಸಿಕೆ ದೊರೆತಿದೆ. 10 ಲಕ್ಷ ಡೋಸ್ ಬೆಂಗಳೂರಿಗೆ ಹಾಗೂ 5 ಲಕ್ಷ ಡೋಸ್ ಬೆಳಗಾವಿಗೆ ಕಳುಹಿಸಲಾಗಿದೆ. ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ರಜೆ ಇದ್ದಿದ್ದರಿಂದ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವುದರಿಂದ ಇನ್ನಷ್ಟು ಇಳಿಕೆ ಮಾಡಬಹುದು. ಎಂಟು ರಾಜ್ಯಗಳೊಂದಿಗೆ ಪ್ರಧಾನಿಯವರು ಸಭೆ ನಡೆಸಿ, ಕಠಿಣ ನಿರ್ಧಾರ ಕೈಗೊಳ್ಳುವಂತೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಕಠಿಣ ನಿರ್ಧಾರ ವಹಿಸಲಾಗಿದೆ. ನಮ್ಮ ರಾಜ್ಯದಲ್ಲಿ ಆ ಬಗೆಯ ಪರಿಸ್ಥಿತಿ ಬರುವುದು ಬೇಡ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುವುದಿಲ್ಲ ಎಂದು ಭಾವಿಸುವುದು ಬೇಡ ಎಂದರು.
ಸೋಂಕಿತರ ಸಂಖ್ಯೆ ಹೆಚ್ಚಾದರೆ ಹಾಸಿಗೆ ಕೊರತೆಯಾಗುತ್ತದೆ. ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳ ಬಳಿ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ಇನ್ನಷ್ಟು ಚರ್ಚೆ ಮಾಡುತ್ತೇನೆ. ಇನ್ನೂ ಮೇ ಅಂತ್ಯದವರೆಗೆ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ತಾಂತ್ರಿಕ ಸಲಹಾ ಸಮಿತಿಯವರು ಹೇಳಿದ್ದಾರೆ. ಎರಡನೇ ಅಲೆಯನ್ನು ನಿಯಂತ್ರಿಸಿ ಜೀವ ಉಳಿಸುವ ಕೆಲಸ ಮಾಡಬೇಕು. ಇದಕ್ಕೆ ಎಲ್ಲ ಸಹಕಾರ ಬೇಕು ಎಂದು ಮನವಿ ಮಾಡಿದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ