October 17, 2021

Newsnap Kannada

The World at your finger tips!

ರಾಜ್ಯಕ್ಕೂ ಬೇಕು ಗುಜರಾತ್ ಮಾದರಿ ಸಂಪುಟ: ವಿಜಯೇಂದ್ರ

Spread the love

ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದ್ರೆ ಒಳ್ಳೆಯದೇ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.


ಗುಜರಾತ್ ಮಾದರಿ ಸಂಪುಟ ಸಂಬಂಧ ಶಾಸಕ ರೇಣುಕಾಚಾರ್ಯ ಹೇಳಿಕೆಯಲ್ಲಿ ದುರುದ್ದೇಶವಿಲ್ಲ ಎಂದು ಅವರು ದಾವಣಗೆರೆಯಲ್ಲಿಂದು ವರದಿಗಾರರಿಗೆ ತಿಳಿಸಿದರು.
ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಯಾಗಿ ವಾರಗಳೇ ಕಳೆದ ನಂತರ ಈ ರೀತಿಯ ಹೇಳಿಕೆ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.


ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ರಾಜ್ಯದ ಜನತೆಗೆ ತಿಳಿಸುವುದು ನಮ್ಮ ಗುರಿಯಾಗಿದೆ. ಹಾನಗಲ್ , ಸಿಂದಗಿ ಉಪಚುನಾವಣೆ ಸೇರಿ ಮತ್ತಿತರರ ಪ್ರಮುಖ ವಿಷಯಗಳ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ವಿಜಯೇಂದ್ರ ವಿವರಿಸಿದರು.


ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಕ್ಷ ಕಟ್ಟಲು ಶ್ರಮಪಟ್ಟಿದ್ದಾರೆ. ಬರುವ ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪಕ್ಷವು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುವಂತೆ ಮಾಡಲು ಯತ್ನಿಸುತ್ತಾರೆಂದರು.


ದೇವಾಲಯಗಳ ಹೆಸರಲ್ಲಿ ಕಾಂಗ್ರೆಸ್ ಮೊಸಳೆ ಕಣ್ಣೀರು ಹಾಕುತ್ತಿದೆ. ಆ ಪಕ್ಷಕ್ಕೆ ಇದ್ದಕ್ಕಿದ್ದಂತೆ ಹಿಂದೂಗಳ ಮೇಲೆ ಪ್ರೀತಿಬಂದಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ವ್ಯಂಗ್ಯವಾಡಿದರು. ಮುಂದೆ ಬರುವ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ಹೇಳಹೆಸರಿಲ್ಲದಂತೆ ಹೋಗುತ್ತದೆ ಎಂದು ಭವಿಷ್ಯ ನುಡಿದರು.


error: Content is protected !!