December 22, 2024

Newsnap Kannada

The World at your finger tips!

vote , election , Tripura

ಸೆಪ್ಟೆಂಬರ್ 3 ರಂದು ರಾಜ್ಯದ ಮೂರು ನಗರ ಪಾಲಿಕೆಗಳ ಚುನಾವಣೆ ನಿಗದಿ

Spread the love

ಕೊರೋನಾ ಭೀತಿಯ ನಡುವೆಯೂ ರಾಜ್ಯದ ಮೂರು ನಗರ ಪಾಲಿಕೆ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆ.

ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ನಗರ ಪಾಲಿಕೆಗಳಿಗೆ ರಾಜ್ಯ ಚುನಾವಣಾ ಆಯೋಗವು ಸೆಪ್ಟೆಂಬರ್ 3 ರಂದು ಚುನಾವಣೆ ದಿನಾಂಕ ನಿಗದಿ ಮಾಡಿದೆ.

ಆಗಸ್ಟ್ 16 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಆಗಸ್ಟ್ 23 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ಸೆಪ್ಟೆಂಬರ್ 6 ರಂದು ಫಲಿತಾಂಶ ಪ್ರಕಟ.‌

ಆ.16ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ಅಂದೇ ಮೂರು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.

Copyright © All rights reserved Newsnap | Newsever by AF themes.
error: Content is protected !!