ಸಿಎಂ ಬಸವರಾಜ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಕಾರ್ ತಡೆದು ನಮ್ಮ ಗ್ರಾಮಕ್ಕೆ ಬಸ್ ಬಿಡುವಂತೆ ಶಾಲಾ ವಿದ್ಯಾರ್ಥಿನಿಯರು ಮನವಿ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮಕ್ಕೆ ಬೊಮ್ಮಾಯಿ ಅವರು ಶನಿವಾರ ಆಗಮಿಸಿದ್ದರು.
ಈ ವೇಳೆ ಬೊಮ್ಮಾಯಿ ಗ್ರಾಮದ ಮಲಿಯಮ್ಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ದೇವಿಯ ಆಶೀರ್ವಾದ ಪಡೆದುಕೊಂಡ ನಂತರ ಗ್ರಾಮದಲ್ಲಿ ಕಂದಾಯ ದಾಖಲೆಗಳು ಮನೆಮನೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ವೇಳೆ ತಿಮ್ಮಾಪುರ ಗ್ರಾಮದ ವಿದ್ಯಾರ್ಥಿನಿಯರ ಗುಂಪೊಂದು ಅವರ ಕಾರನ್ನು ತಡೆದು ನಮ್ಮ ಗ್ರಾಮಕ್ಕೆ ಬಸ್ ಬಿಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಈ ವೇಳೆ ವಿದ್ಯಾರ್ಥಿನಿಯರು, ಬಸ್ ಇಲ್ಲದ ಕಾರಣ ನಾವು ಶಾಲೆಗೆ ಪ್ರತಿದಿನ ತೀರ್ಥ ಗ್ರಾಮದಿಂದ ನಾಲ್ಕೈದು ಕಿ.ಮೀ ನಡೆದುಕೊಂಡು ಹೋಗಬೇಕಾಗುತ್ತದೆ. ಇದರಿಂದ ನಮಗೆ ತುಂಬಾ ತೊಂದರೆಯಾಗುತ್ತಿದೆ. ಅದಕ್ಕೆ ನೀವು ನಮ್ಮ ಗ್ರಾಮಕ್ಕೆ ಬಸ್ ಬಿಡಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಈ ಹಿನ್ನೆಲೆ ಬೊಮ್ಮಾಯಿ ವಿದ್ಯಾರ್ಥಿನಿಯರ ಮನವಿ ಸ್ವೀಕರಿಸಿ ಅವರ ತಲೆ ಮೇಲೆ ಕೈ ಇಟ್ಟು ಬಸ್ ಬಿಡಿಸುವ ಭರವಸೆ ನೀಡಿದ್ದಾರೆ.
ಕೋವಿಡ್ ಸಮಯದಿಂದ ನಮಗೆ ಸೈಕಲ್‍ಗಳೂ ಬಂದಿಲ್ಲ ಎಂದು ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಎಲ್ಲ ಸಮಸ್ಯೆಗಳನ್ನು ಪರಿಹರಿಸುವುದಾಗಿ ಬೊಮ್ಮಾಯಿ ಅವರು ತಿಳಿಸಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ