ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಮರಣೋತ್ತರ ಪರೀಕ್ಷೆಗಾಗಿ ಜೀವಂತ ವ್ಯಕ್ತಿಯನ್ನೇ ಕಳುಹಿಸಿರುವ ಎಡವಟ್ಟು ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಶಂಕರ್ ಗೊಂಬಿ (27) ವ್ಯಕ್ತಿಗೆ ಕಾರು ಅಪಘಾತದಲ್ಲಿ ತಲೆಗೆ ಗಂಭೀರವಾದ ಗಾಯವಾಗಿತ್ತು. ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೈದ್ಯರು ವೆಂಟಿಲೇಟರ್ ಅಳವಡಿಸಿ ಶಂಕರ್ ಅವರನ್ನು ಮಹಾಲಿಂಗಪುರ ಆಸ್ಪತ್ರೆಗೆ ದಾಖಲಿಸುವಂತೆ ಹೇಳಿದ್ದರು.
ನಂತರ ಮಾರ್ಗ ಮಧ್ಯೆಯೇ ಶಂಕರ್ ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಹೀಗಾಗಿ ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕಳುಹಿಸಿದ್ದರು.
ಇನ್ನೇನು ಪೋಸ್ಟ್ ಮಾರ್ಟಮ್ ಮಾಡಬೇಕೆಂದು ಮುಂದಾದಾಗ ಶವಾಗಾರದ ವೈದ್ಯರಿಗೆ ಶವದ ಕೈಕಾಲು ಅಲುಗಾಡುತ್ತಿರುವುದು ಕಂಡು ಬಂದಿದೆ.
ಶಾಕ್ ಆದ ವೈದ್ಯರು ಪರೀಕ್ಷಿಸಿದಾಗ ವ್ಯಕ್ತಿ ಬದುಕಿದ್ದಾರೆ. ತಕ್ಷಣ ಅವರನ್ನು ಮಹಾಲಿಂಗಪುರ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಶಂಕರ್ ಗೊಂಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಚೇತರಿಸಿ ಕೊಳ್ಳುತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು