ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ಕನ್ನಡಿಗರ ಶಕ್ತಿ ಏನೆಂದು ತೋರಿಸುವ ಕಾಲ ಈಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ತಡರಾತ್ರಿ ಪುಂಡರು ನಡೆಸಿರುವ ದಾಂಧಲೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿರುವ ಕುಮಾರಸ್ವಾಮಿ ಬೆಳಗಾವಿಯಲ್ಲಿ ನಡೆಯುತ್ತಿರುವ ಇಂಥ ಭಯೋತ್ಪಾದನೆಯನ್ನು ಕೊನೆಗಾಣಿಸಬೇಕಾಗಿದೆ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಘಟನೆ ಕುರಿತಂತೆ ಟ್ವೀಟ್ ಮೂಲಕ ಮಾಡಿರುವ ಕುಮಾರಸ್ವಾಮಿ ಅವರು, ಪುಂಡರ ಹೆಡೆಮುರಿ ಕಟ್ಟಿ ತಕ್ಕ ಶಾಸ್ತಿ ಮಾಡಬೇಕು. ಮತ್ತೆ ಇಂಥ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷಾ ವೈಷಮ್ಯವನ್ನು ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿಯನ್ನು ಕದಡಿ ಜನರಲ್ಲಿ ಭಯಭೀತಿ ಉಂಟು ಮಾಡಲು ಪುಂಡರನ್ನು ಪ್ರಚೋದಿಸಿದವರನ್ನು ಹೊರಗೆಳೆದು ಶಿಕ್ಷಿಸಬೇಕು. ಈ ಪುಂಡಾಟದ ಹಿಂದೆ ದೊಡ್ಡ ಹುನ್ನಾರ ಇರುವಂತಿದೆ ಎಂದು ಕಿಡಿಕಾರಿದ್ದಾರೆ.
ಬೆಳಗಾವಿ ವಿವಾದ ಮುಗಿದ ಅಧ್ಯಾಯ. ಆದಾಗ್ಯೂ ಕೆಲ ವಿಚ್ಛಿಧ್ರಕಾರಿ ಶಕ್ತಿಗಳು ಆ ಭಾಗದಲ್ಲಿ ಅಶಾಂತಿ ಸೃಷ್ಟಿಸುತ್ತ ಕನ್ನಡಿಗರು-ಮರಾಠಿಗರ ನಡುವೆ ವೈಷಮ್ಯಕ್ಕೆ ಕಾರಣವಾಗುತ್ತಿದ್ದಾರೆ. ಅಂಥ ಶಕ್ತಿಗಳನ್ನು ಸರ್ಕಾರ ಮೂಲೋತ್ಪಾಟನೆ ಮಾಡಬೇಕು. ಪುಂಡರನ್ನು ಕೂಡಲೇ ಬೇಟೆ ಆಡಿ ಇನ್ನೆಂದೂ ಅಂಥ ತಪ್ಪು ಮಾಡದಂತೆ ತಕ್ಕಶಾಸ್ತಿ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
- ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
- ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
More Stories
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ