ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಯುವಕರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ತಲವಾಲಿ ಬಳಿ ನಡೆದಿದೆ.
ರಿಶಿ ಪವಾರ್(19), ಸೂರಜ್(25), ಚಂದ್ರಭಾನ ರಘುವಂಶಿ(23), ಸೋನು ಜತ್(23), ಸುಮಿತ್ ಸಿಂಗ್(30) ಮತ್ತು ದೇವ್(28) ಮೃತರು ಎಂದು ಗುರುತಿಸಲಾಗಿದೆ.
ಮೃತರು ಇಂದೋರ್ ನಿವಾಸಿಗಳಾಗಿದ್ದಾರೆ. ಈ ಯುವಕರ ತಂಡ ಪಾರ್ಟಿ ಮುಗಿಸಿಕೊಂಡು ಮಾಂಗ್ಲಿಯಾದಿಂದ ತಮ್ಮ ನಗರಕ್ಕೆ ಬರುತ್ತಿರುವಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೇಗವಾಗಿ ಚಲಿಸುತ್ತಿದ್ದ ಕಾರು ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಂತಿದ್ದ ತೈಲ ಸಾಗಾಣೆ ಮಾಡುವ ಟ್ಯಾಂಕರ್ ಗೆ ಗುದ್ದಿದೆ. ಕಾರ್ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಈ ವೇಳೆ ಕಾರಿನಲ್ಲಿದ್ದ ಕೆಲ ಯುವಕರ ದೇಹದ ಭಾಗಗಳು ಕಟ್ ಆಗಿವೆ.
ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗಾಗಿ ಕಳುಹಿಸ ಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಪೋಷಕರಿಗೆ ಮೃತದೇಹವನ್ನು ನೀಡುತ್ತೇವೆ. ಚಾಲಕ ನಿದ್ರೆ ಮಂಪರಿಗೆ ಜಾರಿರಬಹುದು ಅಥವಾ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ಕಾರು ನಿಯಂತ್ರಣಕ್ಕೆ ಸಿಗದೆ ಅಪಘಾತ ಸಂಭವಿಸಿರಬಹುದು.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ