ಮೀಸಲಿಗೆ ಆಗ್ರಹ: ಮತ್ತೊಂದು ಹೋರಾಟಕ್ಕೆ ಚಾಲನೆ

Team Newsnap
1 Min Read

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಇನ್ನೊಂದು ಸುತ್ತಿನ ಹೋರಾಟಕ್ಕೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರಬೆಟ್ಟದಲ್ಲಿ ಗುರುವಾರ ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಚಾಲನೆ ನೀಡಿದರು.


ಗೌಡ ಲಿಂಗಾಯತ, ಮಲೆಗೌಡ ಲಿಂಗಾಯತ. ದೀಕ್ಷಾ ಲಿಂಗಾಯತರನ್ನೊಳಗೊಂಡ ಪಂಚಮಸಾಲಿ ಸಮುದಾಯದವರ “ಪ್ರತಿಜ್ಞಾ ಪಂಚಾಯತ್’ ಘೋಷವಾಕ್ಯದೊಂದಿಗೆ ಅಭಿಯಾನ ಹಮ್ಮಿಕೊಂಡಿದ್ದಾರೆ.


ಈ ಅಭಿಯಾನ ಬರುವ ಅಕ್ಟೋಬರ್ 1 ರತನಕ ರಾಜ್ಯದೆಲ್ಲೆಡೆ ನಡೆಯಲಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್. ಕಾಂಗ್ರೆಸ್ ಮುಖಂಡ, ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಮತ್ತಿತರ ಮುಖಂಡರು ಅಭಿಯಾನದಲ್ಲಿ ಭಾಗವಹಿಸಿದ್ದರು.

ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆರು ತಿಂಗಳ ಅವಕಾಶ ಕೇಳಿದ್ದರು. ಅದು ಸೆಪ್ಟೆಂಬರ್ 15 ಕ್ಕೆ ಕೊನೆಗೊಳ್ಳಲಿದೆ. ಈ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಅಭಿಯಾನ ಕೈಗೊಳ್ಳಲಾಗಿದೆ ಎಂದು ಸ್ವಾಮೀಜಿ ವಿವರಿಸಿದರು.


ಮೈಸೂರು, ಕೊಡಗು, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ರಾಜ್ಯದ ಇತರ ಕಡೆಗಳಲ್ಲಿ ಜಾಗೃತಿ ಸಭೆ ನಡೆಯಲಿದೆ. ಅಕ್ಟೋಬರ್ 1 ರಂದು ಬೆಂಗಳೂರಿನಲ್ಲಿ ಸಮಾವೇಶಕ್ಕೆ ತೆರೆ ಬೀಳಲಿದೆ.

Share This Article
Leave a comment