December 20, 2024

Newsnap Kannada

The World at your finger tips!

udupi s

ಸರ್ಕಾರ ಹೈಕೋರ್ಟ್ ಮೇಲೆ ಒತ್ತಡ ಹೇರಿದ ನಂತರ ಬಂದ ತೀರ್ಪು: ಉಡುಪಿ ವಿದ್ಯಾರ್ಥಿನಿಯರು

Spread the love

ಸರ್ಕಾರ ಮಧ್ಯಂತರ ಆದೇಶದ ಮೂಲಕ ಕೋರ್ಟ್ ಮೇಲೆ ಒತ್ತಡ ಹಾಕಿದೆ. ರಾಜ್ಯ ಸರ್ಕಾರ ಕೋರ್ಟ್ ತೀರ್ಪಿನ ಮೇಲೆ ಹಸ್ತಕ್ಷೇಪ ಮಾಡಿರುವುದರಿಂದ ಇಂದು ಹಿಜಬ್ ವಿರುದ್ಧ ತೀರ್ಪು ಬಂದಿದೆ ಎಂದು ಉಡುಪಿ ವಿದ್ಯಾರ್ಥಿನಿ ಆಲಿಯಾ ಅಸಾದಿ ಹಿಜಬ್ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉಡುಪಿಯ ಆರು ಮಂದಿ ವಿದ್ಯಾಥಿ೯ನಿಯರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ
ಸಮವಸ್ತ್ರ ಕಡ್ಡಾಯಗೊಳಿಸಿದದರೂ ಸಹ ನಾವು ಹಿಜಾಬ್ ತೆಗೆಯವುದಿಲ್ಲ ಎಂದರು.

ಈ ವೇಳೆ ಮಾತನಾಡಿದ ಆಲಿಯಾ, ನಮಗೆ ನ್ಯಾಯಾಲಯದ ಮೇಲೆ ಬಹಳ ನಿರೀಕ್ಷೆ ಇತ್ತು. ವ್ಯವಸ್ಥೆ ಮೇಲೆ ಬಹಳ ಭರವಸೆ ಇತ್ತು. ಧರ್ಮದಲ್ಲಿ ನಮಗೆ ಹಿಜಬ್ ಅವಕಾಶ ಇತ್ತು. ಎಲ್ಲಾ ಮುಸ್ಲಿಂ ಮಹಿಳೆಯರಿಗೂ ನಮ್ಮ ಧರ್ಮದಲ್ಲಿ ತಲೆ ಮತ್ತು ಎದೆ ಮುಚ್ಚುವ ಅವಕಾಶ ಇದೆ. ಆದರೆ ಹೈಕೋರ್ಟ್ ತೀರ್ಪು ನಮ್ಮ ವಿರುದ್ಧ ಬಂದಿದೆ ಎಂದರು.

ನಾವು ಹಿಜಬ್ ತೆಗೆದು ತರಗತಿ ಪ್ರವೇಶಿಸುವುದಿಲ್ಲ. ನಾವು ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇವೆ. ಕುರಾನ್‌ನಲ್ಲಿ ದೇಹವನ್ನು ಮುಚ್ಚಬೇಕೆಂಬ ಉಲ್ಲೇಖ ಇದೆ. ಹಿಜಬ್ ಅವಶ್ಯಕತೆ ಇಲ್ಲದಿದ್ದರೆ ನಾವು ಹಿಜಬ್ ತೊಡುತ್ತಿರಲಿಲ್ಲ, ಹೋರಾಟವೂ ಮಾಡುತ್ತಿರಲಿಲ್ಲ. ನಮಗೆ ಶಿಕ್ಷಣ ಹಾಗೂ ಹಿಜಬ್ ಎರಡೂ ಬೇಕು ಎಂದು ಮನವಿ ಮಾಡಿಕೊಂಡರು. 

ಇಲ್ಲಿ ನಮಗೆ ನ್ಯಾಯ ಇಲ್ಲ ಎಂದು ಅನ್ನಿಸುತ್ತಿದೆ. ನಮ್ಮನ್ನು ಇಲ್ಲಿ ಬೇರೆಯೇ ರೀತಿಯಲ್ಲಿ ನೋಡುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಈ ಸಮಸ್ಯೆ ಅನುಭವಿಸುತ್ತಿದ್ದೇವೆ. ಈ ಬಗ್ಗೆ ನಾವು ಡಿಸಿ, ಡಿಡಿಪಿಐ ಭೇಟಿ ಮಾಡಿದರೂ ನ್ಯಾಯ ಸಿಗಲಿಲ್ಲ. ನಾವು ಜಾತ್ಯಾತೀತ ದೇಶದಲ್ಲಿ ಇಲ್ಲ ಎನಿಸುತ್ತಿದೆ ಎಂದು ಹಿಜಬ್ ಹೋರಾಟಗಾರ್ತಿ ಅಲ್ಮಾಸ್ ಹೇಳಿಕೆ ನೀಡಿದ್ದಾರೆ.

ನಮ್ಮ ಮುಂದಿನ ನಡೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಾವು ನಮ್ಮ ವಕೀಲರ ಜೊತೆ ಚರ್ಚೆ ಮಾಡುತ್ತಿದ್ದೇವೆ. ನಾವು ಈಗಾಗಲೇ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ. ಈಗ ಬಂದ ತೀರ್ಪಿನಿಂದ ನಾವು ಬಹಳ ನೊಂದಿದ್ದೇವೆ ಎಂದು ಅಲ್ಮಾಸ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!