ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ಬಂದಿದ್ದು, ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸದ್ಯದಲ್ಲಿಯೇ ಹೊಸ ಸಚಿವರು ಯಾರು? ಯಾರಿಗೆ ಯಾವ ಖಾತೆ ಎನ್ನುವುದು ಗೊತ್ತಾಗಲಿದೆ. ಇನ್ನೆರೆಡು ಮೂರು ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಸಂಬಂಧ ಬುಧವಾರ ದೆಹಲಿಗೆ ತೆರಳಿದ್ದ ಸಿಎಂ ಯಡಿಯೂರಪ್ಪ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ 20 ನಿಮಿಷಗಳ ಕಾಲ ಚರ್ಚೆ ನಡೆಸಿ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.
ಯಡಿಯೂರಪ್ಪ ಅವರು ನಡ್ಡಾ ಅವರಿಗೆ ಸಂಪುಟ ವಿಸ್ತರಣೆಗೆ ಅನುಮತಿ ಕೋರಿದ್ದಾರೆ. ಜೊತೆಗೆ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಆದರೆ ಹೈಕಮಾಂಡ್ ವರಿಷ್ಠರು ಇನ್ನು ಯಾವುದೇ ಅಂತಿಮ ತೀರ್ಮಾನವನ್ನು ತಿಳಿಸಿಲ್ಲ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ