ಈಕೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮೂಲದ ಆಶ್ರಿತಾ ವಿ ಒಲೆಟಿ. ದೇಶದ ವಾಯುಸೇನೆಯ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಎಂಜಿನಿಯರ್ ಆಗಿ ಆಯ್ಕೆಯಾಗಿ ದ್ದಾರೆ.
ಆಶ್ರಿತಾ ವಿ ಒಲೆಟಿ ಅವರು ಇಡೀ ಪ್ರಪಂಚದಲ್ಲಿರುವ ಏಳು ವಿಶ್ವವಿದ್ಯಾಲಯಗಳ ಪೈಕಿ ಒಂದಾಗಿರುವ ಭಾರತದ ಪ್ರತಿಷ್ಠಿತ ಏರ್ ಫೋರ್ಸ್ ಟೆಸ್ಟ್ ಪೈಲಟ್ ಸ್ಕೂಲ್‍ನಿಂದ ಪದವಿಯನ್ನು ಪಡೆದುಕೊಂಡಿದ್ದಾರೆ.
1976ರಲ್ಲಿ ಸ್ಥಾಪನೆಯಾದಾಗಿನಿಂದ ಈವರೆಗೆ ಕೇವಲ 275 ಪದವೀದರರು ಮಾತ್ರ ಈ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದಾರೆ. ಆಶ್ರಿತಾ ಒಲೆಟಿ ಅತ್ಯಂತ ಕಠಿಣ ತರಬೇತಿಗಳನ್ನು ಒಳಗೊಂಡಿರುವ ಈ ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಭಾರತೀಯ ವಾಯುದಳದ ಮೊಟ್ಟ ಮೊದಲ ಮಹಿಳಾ ಅಧಿಕಾರಿಯಾಗಿ ಕ್ವಾಡ್ರಲ್ ಲೀಡರ್ ಆಗಿ ನೇಮಕಗೊಂಡಿದ್ದಾರೆ.
ಫ್ಲೈಟ್ ಟೆಸ್ಟ್ ಇಂಜಿನಿಯರ್ ವಿಮಾನಗಳ ಸೇವೆಗೆ ಮುಕ್ತ ಮಾಡಲು ಇವರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು