ಒಂದು ವರ್ಷದಲ್ಲಿ ಎತ್ತಿನ ಹೊಳೆ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ಳುವೆ ಎಂದಿದ್ದೆ. ಆಗ ಅಂದು ತಲೆ ತುಂಬಾ ಕೂದಲಿತ್ತು, ಇಂದು ಇಲ್ಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಡಿ ಕೆ, ಸಿದ್ದರಾಮಯ್ಯ ಮಾತ್ರ ಬ್ರಿಲಿಯಂಟ್ ಅಲ್ಲ. ನನಗೂ ಜ್ಞಾಪಕ ಶಕ್ತಿ ಇದೆ. ನಾನು ಅಂದೆ ಹೇಳಿದ್ದೆ ಕೋಲಾರಕ್ಕೆ ಒಂದು ವರ್ಷದಲ್ಲಿ ಎತ್ತಿನಹೊಳೆ ನೀರು ಬಂದರೆ ತಲೆ ಬೋಳಿಸಿಕೊಳ್ಳುವೆ ಎಂದಿದ್ದೆ ಎಂದರು.
2014ರಲ್ಲಿ ಅಡಿಪಾಯ ಹಾಕಿ ಇದುವರೆಗೂ ನೀರು ಕೊಟ್ಟಿಲ್ಲ. ಇನ್ನೂ 50 ವರ್ಷ ಆದರೂ ರಾಷ್ಟ್ರೀಯ ಪಕ್ಷಗಳಿಂದ ನೀರು ಕೊಡಲು ಆಗಿಲ್ಲ ಎಂದು ಟೀಕಿಸಿದರು.
ನಾಳೆ ಎಸ್‍ಎಸ್‍ಎಸ್‍ಎಲ್‍ಸಿ ಪರೀಕ್ಷೆ ವಿಚಾರವಾಗಿ ಮಾತನಾಡಿ, ಯಾವುದೆ ಸಮಾಜದ ಮಕ್ಕಳಾಗಲಿ ಮುಕ್ತವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅವರೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ವ್ಯಾಪಾರಕ್ಕೆ ನಿರ್ಬಂಧ ವಿಚಾರ, ದೇಶವನ್ನು ಎಲ್ಲಿಗೆ ಕೊಂಡೊಯ್ಯುತ್ತಿದ್ದಾರೆ ಎಂದು ಬಿಜೆಪಿಗೆ ಟಾಂಗ್ ನೀಡಿದರು.
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!