ಈ ಸರ್ಕಾರದಲ್ಲಿ ಹಣ ಕೊಡದೇ ಯಾವುದೇ ಕೆಲಸ ಕೊಡಲ್ಲ. ಯುವಕರು ಸರ್ಕಾರಿ ನೌಕರಿ ಪಡೆಯಬೇಕು ಅಂದರೆ ಲಂಚ ಕೊಡಬೇಕು. ಇದನ್ನು ಓದಿ –ಮೈಸೂರಿನ ಇರ್ವಿನ್ ರಸ್ತೆ ವಿಸ್ತರಣೆ ಕಾಮಗಾರಿ ಸುಗಮ:ಅಡ್ಡಿಯಾಗಿದ್ದ ಮಸೀದಿ ಗೋಡೆ ತೆರವು
ಯುವತಿಯರು ನೌಕರಿ ಪಡೆಯಬೇಕು ಅಂದ್ರೆ ಮಂಚ ಹತ್ತಬೇಕಾಗಿದೆ. ಹೀಗಾಗಿ ಸದ್ಯ ರಾಜ್ಯದಲ್ಲಿರುವುದು ಲಂಚ- ಮಂಚದ ಸರ್ಕಾರವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು.
ಟ್ವೀಟ್ ಮಾಡಿರುವ ಬಿಜೆಪಿ, ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು, ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ, ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ್ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ ಎಂದು ಪ್ರಶ್ನಿಸಿ ಕೂಡಲೇ ಕ್ಷಮೆಯಾಚಿಸಿ ಎಂದು ಆಗ್ರಹಿಸಿದೆ.
ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದು ಟಾಂಗ್ ನೀಡಿದ್ದಾರೆ.
More Stories
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ
ಹೊಸ ಜಿಲ್ಲೆಗಳ ಘೋಷಣೆ ಬಗ್ಗೆ ಪ್ರಸ್ತಾವನೆ ಇಲ್ಲ: ಸಚಿವ ಕೃಷ್ಣ ಬೈರೇಗೌಡ