ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ರೈತರು ಮೃತಪಟ್ಟಿರುವ ಬಗ್ಗೆ ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ
ಇದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಂಸತ್‌ನಲ್ಲಿ ಲಿಖಿತ ಪ್ರತಿಕ್ರಿಯೆ.
ಸಂಸತ್ ಅಧಿವೇಶನದಲ್ಲಿ ರೈತರ ಪ್ರತಿಭಟನೆ ಕುರಿತು ಪ್ರತಿಪಕ್ಷಗಳು ಧ್ವನಿ ಎತ್ತಿದವು. ಪ್ರತಿಭಟನೆ ವೇಳೆ ಸಾವಿಗೀಡಾದ ರೈತರ ಕುಟುಂಬಗಳಿಗೆ ಹಣಕಾಸು ನೆರವು ನೀಡಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದವು. ಇದಕ್ಕೆ ಪ್ರತಿಕ್ರಿಯಿಸಿರುವ ಕೃಷಿ ಸಚಿವರು, ಈ ಸಂಬಂಧ ಕೃಷಿ ಇಲಾಖೆಯಲ್ಲಿ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಪರಿಹಾರ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಒಂದು ವರ್ಷದಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ವರ್ಷದ ಅವಧಿಯಲ್ಲಿ ಸುಮಾರು 700 ರೈತರು ಪ್ರತಿಭಟನಾ ಸ್ಥಳದಲ್ಲಿ ಮೃತಪಟ್ಟಿದ್ದಾರೆಂದು ರೈತ ನಾಯಕರು ಹಾಗೂ ಪ್ರತಿಪಕ್ಷಗಳು ಹೇಳಿವೆ.
ಮಸೂದೆಗಳನ್ನು ಚರ್ಚೆಗೆ ಒಳಪಡಿಸದೇ ಅಂಗೀಕಾರ ಸರಿಯಲ್ಲ. ಪ್ರತಿಭಟನೆ ವೇಳೆ ನೂರಾರು ರೈತರು ಸಾವನ್ನಪ್ಪಿದ್ದಾರೆ. ಅವರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು. ಹೀಗಾಗಿ ಮಸೂದೆಯನ್ನು ಚರ್ಚೆಗೆ ಒಳಪಡಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದವು. ಪ್ರತಿಪಕ್ಷಗಳ ವಿರೋಧದ ನಡುವೆಯೂ ಮಸೂದೆಗೆ ಅಂಗೀಕಾರ ನೀಡಲಾಯಿತು.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
More Stories
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ
ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ