ಜಾಗತಿಕ ಮೆಸೇಜಿಂಗ್ ವೇದಿಕೆಗಳನ್ನು ವಿದೇಶಿ ಹಾಗೂ ವಿದೇಶಿ ವಾಣಿಜ್ಯ ಸಂಸ್ಥೆ ಎಂದು ಕರೆಯುವ ಹೊಸ ಐಟಿ ನಿಯಮಗಳನ್ನು ಪ್ರಶ್ನಿಸಿ ವಾಟ್ಸಾಪ್ ಹಾಗೂ ಫೇಸ್ಬುಕ್ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ವಿರೋಧ ಸೂಚಿಸಿ ತಳ್ಳಿ ಹಾಕಿದೆ.
ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಸಲಾಗಿರುವ ಅಫಿಡವಿಟ್ನಲ್ಲಿ ಕೇಂದ್ರ ಸರ್ಕಾರವು, ವಿದೇಶಿ ವಾಣಿಜ್ಯ ಸಂಸ್ಥೆಯಾಗಿರುವ ಫೇಸ್ಬುಕ್ ಹಾಗೂ ವಾಟ್ಸಾಪ್ಗೆ ಭಾರತದ ಸಾಂವಿಧಾನಿಕ ಕಾನೂನುಗಳನ್ನು ಪ್ರಶ್ನೆ ಮಾಡುವ ಅಧಿಕಾರವಿಲ್ಲ ಎಂದು ಹೇಳಿತ್ತು.
ಈ ಕಂಪನಿಯು ಭಾರತದಲ್ಲಿ ಯಾವುದೇ ವ್ಯಾಪಾರಿ ಸ್ಥಳವನ್ನು ಹೊಂದಿಲ್ಲ. ಕೇವಲ ವ್ಯವಹಾರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ ಎಂದು ಸ್ಪಷ್ಟನೆ ನೀಡಿದೆ.
ಭಾರತೀಯ ಸಂವಿಧಾನದ ಅಡಿಯಲ್ಲಿ ಇರುವ ಕಾನೂನು ನಿಬಂಧನೆಗಳನ್ನು ಪ್ರಶ್ನಿಸಲು ವಿದೇಶಿ ವಾಣಿಜ್ಯ ಸಂಸ್ಥೆಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಈ ಹಕ್ಕುಗಳು ಕೇವಲ ದೇಶದ ನಾಗರಿಕರಿಗೆ ಮಾತ್ರ ಲಭ್ಯವಿದೆ ಎಂದು ಅಫಿಡವಿಟ್ನಲ್ಲಿ ತಿಳಿಸಲಾಗಿದೆ.
ಹೊಸ ಐಟಿ ನಿಯಮಾವಳಿಗಳನ್ನು ನ್ಯಾಯಾಲಯದ ಎದುರು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ ಇದು ಅಪರಾಧಗಳನ್ನು ತಡೆಯಲು ಕಾನೂನು ವ್ಯವಸ್ಥೆಗೆ ನೆರವಾಗಲಿದೆ ಎಂದು ಹೇಳಿದೆ.
ವಾಟ್ಸಾಪ್ನ ಹೊಸ ನಿಯಮಾವಳಿಗಳ ವಿಚಾರವಾಗಿಯೂ ಅಫಿಡವಿಟ್ನಲ್ಲಿ ವಿವರಣೆ ನೀಡಿರುವ ಕೇಂದ್ರ ಸರ್ಕಾರ ವಾಟ್ಸಾಪ್ನ ಹೊಸ ನಿಯಮಾವಳಿಗಳು ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಫೇಸ್ಬುಕ್ಗೆ ನೀಡುತ್ತದೆ. ಈ ನಿಯಮವು ರಾಷ್ಟ್ರದ ಭದ್ರತೆ ಹಾಗೂ ಅದರ ಸಾರ್ವಭೌಮತ್ವಕ್ಕೆ ಹಾನಿ ಉಂಟು .ಅಲ್ಲದೇ ವೈಯಕ್ತಿಕ ಖಾಸಗಿತನದ ಮೇಲೂ ಇದು ಪರಿಣಾಮ ಬೀರುತ್ತದೆ ಎಂದು ಹೇಳಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ