ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಇಂದು ಮತ್ತು ನಾಳೆ ಕೊರೊನಾ ಲಸಿಕೆ ಹಾಕುವ ಪ್ರಕ್ರಿಯೆ ನಡೆಯುವುದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಕೋವಿನ್ ಸಾಫ್ಟ್‌ವೇರ್ ಅಪ್ಡೇಟ್ ಮಾಡಬೇಕಿರುವ ಹಿನ್ನೆಲೆ ದೇಶದಲ್ಲಿ ಎರಡು ದಿನಗಳ ಕಾಲ ಕೊರೊನಾ ಲಸಿಕೆ ವಿತರಣೆ ನಡೆಯುವುದಿಲ್ಲ.
ಡಿಜಿಟಲ್ ಪ್ಲಾಟ್‌ಫಾರ್ಮ್ ಆಗಿರುವ ಕೋ-ವಿನ್ 1.0 ಇನ್ಮುಂದೆ ಕೋ-ವಿನ್ 2.0ಗೆ ಪರಿವರ್ತನೆಯಾಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಈ ನಿರ್ಧಾರ ಕೈಗೊಳ್ಳಲಾಗಿದೆ.
ಭಾರತದಲ್ಲಿ ಕೊರೊನಾ ವಾರಿಯರ್ಸ್ ಹಾಗೂ ಫ್ರಂಟ್ಲೈನ್ ವರ್ಕರ್ಸ್ ಸೇರಿ ಒಟ್ಟು 1.34 ಕೋಟಿ ಜನರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲಾಗಿದೆ.
ಮಾರ್ಚ್ 1 ರಿಂದ ದೇಶಾದ್ಯಂತ ಎರಡನೇ ಹಂತದ ವ್ಯಾಕ್ಸಿನೇಷನ್ ಆರಂಭವಾಗಲಿದೆ., 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಅಸ್ವಸ್ಥತೆ ಹೊಂದಿರುವ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ವಿತರಿಸಲಾಗುತ್ತದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ