ಇಂದು-ನಾಳೆ ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಇಲ್ಲ

Team Newsnap
1 Min Read

ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಇಂದು ಮತ್ತು ನಾಳೆ ಕೊರೊನಾ ಲಸಿಕೆ ಹಾಕುವ ಪ್ರಕ್ರಿಯೆ ನಡೆಯುವುದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಕೋವಿನ್ ಸಾಫ್ಟ್‌ವೇರ್ ಅಪ್​ಡೇಟ್ ಮಾಡಬೇಕಿರುವ ಹಿನ್ನೆಲೆ ದೇಶದಲ್ಲಿ ಎರಡು ದಿನಗಳ ಕಾಲ ಕೊರೊನಾ ಲಸಿಕೆ ವಿತರಣೆ ನಡೆಯುವುದಿಲ್ಲ.

ಡಿಜಿಟಲ್ ಪ್ಲಾಟ್‌ಫಾರ್ಮ್ ಆಗಿರುವ ಕೋ-ವಿನ್ 1.0 ಇನ್ಮುಂದೆ ಕೋ-ವಿನ್ 2.0ಗೆ ಪರಿವರ್ತನೆಯಾಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಈ ನಿರ್ಧಾರ ಕೈಗೊಳ್ಳಲಾಗಿದೆ.‌

ಭಾರತದಲ್ಲಿ ಕೊರೊನಾ ವಾರಿಯರ್ಸ್​ ಹಾಗೂ ಫ್ರಂಟ್​ಲೈನ್​ ವರ್ಕರ್ಸ್​ ಸೇರಿ ಒಟ್ಟು 1.34 ಕೋಟಿ ಜನರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲಾಗಿದೆ.

ಮಾರ್ಚ್ 1 ರಿಂದ ದೇಶಾದ್ಯಂತ ಎರಡನೇ ಹಂತದ ವ್ಯಾಕ್ಸಿನೇಷನ್ ಆರಂಭವಾಗಲಿದೆ., 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಅಸ್ವಸ್ಥತೆ ಹೊಂದಿರುವ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ವಿತರಿಸಲಾಗುತ್ತದೆ.

Share This Article
Leave a comment