ಸ್ಫೋಟದ ಆರೋಪಿಗಳಿಗೆ ರಕ್ಷಣೆ ಇಲ್ಲ;ಅನಾಹುತದಲ್ಲಿ ರಾಜಕಾರಣ ಯಾಕೆ ?ಸಚಿವ ಸುಧಾಕರ್‌

Team Newsnap
1 Min Read
Siddu will not win in Kolar : Minister Sudhakarಸಿದ್ದು ಕೋಲಾರದಲ್ಲಿ ಗೆಲ್ಲುವುದಿಲ್ಲ - ಖೆಡ್ಡಾಗೆ ಬಿದ್ದಿದ್ದಾರೆ: ಸಚಿವ ಸುಧಾಕರ್‌

ಚಿಕ್ಕಬಳ್ಳಾಪುರ ಸಮೀಪದ ಹಿರೇನಾಗವಲ್ಲಿ ಸ್ಫೋಟ ಪ್ರಕರಣದ ಆರೋಪಿಗಳನ್ನು ರಕ್ಷಿಸುವ ಇರಾದೆ ಸರ್ಕಾರಕ್ಕೆ ಇಲ್ಲ. ಮಾಲೀಕ ಸೇರಿದಂತೆ ಕೆಲವರನ್ನು ಈಗಾಗಲೇ ಬಂಧಿಸಿ ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಚಿಕ್ಕಬಳ್ಳಾಪುರ ಜಿಲ್ಲಾ ಮಂತ್ರಿ ಡಾ. ಕೆ. ಸುಧಾಕರ್‌ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕೆಲವರು ಘಟನೆಗೆ ರಾಜಕೀಯ ಲೇಪ ಹಚ್ಚುವ, ವೈಯಕ್ತಿಕ ಆರೋಪ ಮಾಡುವ ಕೀಳು ಮಟ್ಟಕ್ಕೆ ಇಳಿದಿದ್ದಾರೆ. ಉರಿವ ಮನೆಯಲ್ಲಿ ಗಳ ಇರಿಯುವ ಇಂತಹ ವರ್ತನೆ ಸಾರ್ವಜನಿಕ ಜೀವನದಲ್ಲಿ ಶೋಭೆ ತರುವುದಿಲ್ಲ ಎಂದರು.

ಶಿವಮೊಗ್ಗ ಸ್ಫೋಟದ ಬಳಿಕ ಜಿಲ್ಲಾಡಳಿತದ ಜತೆ ಮೂರು ಸಭೆ ನಡೆಸಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ, ಸ್ಫೋಟಕಗಳ ಸರಬರಾಜು, ದಾಸ್ತಾನು ಮತ್ತು ಬಳಕೆ ಮೇಲೆ ಕಟ್ಟುನಿಟ್ಟು ಕ್ರಮ ತೆಗೆದುಕೊಳ್ಳುವಂತೆ ಹಾಗೂ ನಿಯಮಿತವಾಗಿ ಗಣಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ನಿರ್ದೇಶನ ನೀಡಿದ್ದೆನು. ಆ ಹಿನ್ನಲೆಯಲ್ಲಿ ಅಧಿಕಾರಿಗಳು ಎಲ್ಲಾ ಕ್ವಾರಿಗಳಿಗೂ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ ಎಂದರು.

ಈಗಾಗಲೇ ಅನಾಹುತದ ಸಂಬಂಧ ಸರ್ಕಲ್‌ ಇನ್ಸ್‌ಪೆಕ್ಟರ್‌, ಸಬ್‌ಇನ್ಸ್‌ಪೆಕ್ಟರ್‌ ಅವರನ್ನು ಅಮಾನತು ಮಾಡಲಾಗಿದೆ. ಗಣಿ ಇಲಾಖೆ ಹಿರಿಯ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಸಚಿವ ಮುರುಗೇಶ್‌ ನಿರಾಣಿ ಅವರ ಜತೆ ಮಾತನಾಡಿರುವುದಾಗಿ ಸಚಿವ ಸುಧಾಕರ್‌ ವಿವರಿಸಿದರು.

Share This Article
Leave a comment