Karnataka

ನನ್ನ, DK ಶಿವಕುಮಾರ್​​ ನಡುವೆ ಯಾವುದೇ ಭಿನ್ನಾಭಿಪ್ರಾಯ , ಬಿರುಕಿಲ್ಲ- ಸಿದ್ದರಾಮಯ್ಯ

ನನ್ನ, DK ಶಿವಕುಮಾರ್​​ ನಡುವೆ ಯಾವುದೇ ಭಿನ್ನಾಭಿಪ್ರಾಯ ,ಬಿರುಕಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಸ್ಪಷ್ಟಪಡಿಸಿದರು

ದಾವಣಗೆರೆಯಲ್ಲಿ ತಮ್ಮ 75ನೇ ಹುಟ್ಟುಹಬ್ಬದ ಅಂವಾಗಿ ನಡೆದ ಸಿದ್ದರಾಮೋತ್ಸವ ಸಮಾವೇಶದಲ್ಲಿ ಮಾತಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, 2022 ಆಗಸ್ಟ್​​ 15ಕ್ಕೆ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಆಗಲಿವೆ. ಹೀಗಾಗಿ ನಾವು ಇಡೀ ದೇಶಾದ್ಯಂತ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಮಾಡುತ್ತಿದ್ದೇವೆ. ನನಗೂ ಇಂದಿಗೆ ಕಾಕತಾಳೀಯ ಎಂಬಂತೆ 75 ವರ್ಷಗಳು ಆಗಿದೆ. ನಾನು ಎಂದೂ ಬರ್ತ್​ಡೇ ಮಾಡಿಕೊಂಡಿಲ್ಲ. ಇದಕ್ಕೆ ಕಾರಣ ನನ್ನ ಪಕ್ಷದ ಸ್ನೇಹಿತರು. ಎಲ್ಲರ ಒತ್ತಡಕ್ಕೆ ಮಣಿದು ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದೇನೆ ಎಂದರು.ಇದನ್ನು ಓದಿ –ಲಿಂಗಧೀಕ್ಷೆ ಪಡೆದ ರಾಹುಲ್ ಗಾಂಧಿ, ಮುರುಘಾ ಮಠದಲ್ಲಿ ಧ್ಯಾನ

ಇಂದಿನ ಕಾರ್ಯಕ್ರಮ ಯಶಸ್ವಿಯಾಗಲು ರಾಹುಲ್​ ಗಾಂಧಿಯವರೇ ಕಾರಣ. ಆಗಲೇ ಅವರೇ ನನಗೆ ಯಾರ ಬರ್ತ್​ಡೇ ಹೋಗೋದಿಲ್ಲ, ಸಿದ್ದರಾಮಯ್ಯ ಅಂದ್ರೆ ನನಗೆ ವಿಶೇಷ ಪ್ರೀತಿ. ಹಾಗಾಗಿ ಬಂದಿದ್ದೇನೆ ಎಂದಿದ್ದಾರೆ. ಅದಕ್ಕೆ ಕೋಟಿ ನಮನಗಳು ಎಂದರು.

ನನ್ನ ಮತ್ತು ಡಿ.ಕೆ ಶಿವಕುಮಾರ್​ ನಡುವೆ ಯಾವುದೇ ಭಿನ್ನಾಭಿಪ್ರಾಯ, ಬಿರುಕು ಇಲ್ಲ. ನಮ್ಮಿಬ್ಬರ ನಡುವೆ ಏನೋ ನಡೀತಿದೆ ಎಂಬುದು ಬಿಜೆಪಿಯವರು ಸೃಷ್ಟಿಸಿರುವ ಸುಳ್ಳು. ನಾವು ಚೆನ್ನಾಗಿಯೇ ಇದ್ದೇವೆ, ಒಟ್ಟಾಗಿ ಎಲೆಕ್ಷನ್​​ನಲ್ಲಿ ಗೆದ್ದು ಅಧಿಕಾರ ಹಿಡಿಯುತ್ತೇವೆ ಎಂದರು.

Team Newsnap
Leave a Comment

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024