February 22, 2026

Newsnap Kannada

The World at your finger tips!

b jaya

ಪೋಷಕ ನಟಿ ಬಿ.ಜಯಾ ಇನ್ನಿಲ್ಲ

Spread the love

ಅನಾರೋಗ್ಯಕ್ಕೆ ಒಳಗಾಗಿದ್ದ ಕನ್ನಡ ಚಿತ್ರರಂಗ ಹಿರಿಯ ಪೋಷಕ ನಟಿ ಬಿ.ಜಯಾ (77) ಜಯಾ ಗುರುವಾರ ಕೊನೆಯುಸಿರೆಳೆದರು.

b jata1

ಸುಮಾರು 300 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಜಯಾ ಹಾಸ್ಯಮಯ ಪಾತ್ರಗಳಲ್ಲೂ ಕಾಣಿಸಿಕೊಂಡಿದ್ದರು.

ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ಜಯಾ ಇತ್ತೀಚಿನ ದಿನಗಳಲ್ಲಿ ಕೆಲವು ಧಾರಾವಾಹಿಗಳಲ್ಲೂ ನಟಿಸಿದ್ದರು.‌

ನಟಿ ಜಯಾ 1958 ರಲ್ಲಿ ಭಕ್ತ ಪ್ರಹ್ಲಾದ ಸಿನಿಮಾ ಮೂಲಕ ಸಿನಿರಂಗಕ್ಕೆ ಕಾಲಿಟ್ಟರು. ‌ ಡಾ. ರಾಜ್ ಕುಮಾರ್ ಅವರೊಂದಿಗೆ ಅತೀ ಹೆಚ್ಚು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದರು.

6 ದಶಕಗಳ ಕಾಲ ಸಿನಿರಂಗದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದ ಹಿರಿಮೆ ಅವರಿಗಿದೆ.

error: Content is protected !!