December 23, 2024

Newsnap Kannada

The World at your finger tips!

BJP , MP , resignation

Kateel resigned from the post of BJP state president ಸೋಲಿನ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್‌ ರಾಜೀನಾಮೆ #BREAKINGNEWS

ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಚರ್ಚೆ ಇಲ್ಲ – ನಳಿನ್ ಕುಮಾರ್ ಕಟೀಲ್

Spread the love

ಮಂಡ್ಯದ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.


ಮಂಡ್ಯದಲ್ಲಿ ಬಿಜೆಪಿ ಫ್ಲೆಕ್ಸ್‌ಗಳಲ್ಲಿ ಸುಮಲತಾ ಫೋಟೋ’ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಬಿಜೆಪಿ ಫ್ಲೆಕ್ಸ್‌ಗಳಲ್ಲಿ ಅವರ ಹಿತೈಷಿಗಳು ಫೋಟೋ ಹಾಕಿಸಿರಬಹುದು ಎಂದು ಸ್ಪಷ್ಟಪಡಿಸಿದ್ದಾರೆ.ರೂಪ ರೂಪಗಳನ್ನು ದಾಟಿ ನಾಮ ಕೋಟಿ ಎಲ್ಲೆ ಮೀಟಿ

sumalath k

ಇದೇ ವೇಳೆ ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೊ ಹಾಕಿದ್ದನ್ನು ಸಮರ್ಥಿಸಿಕೊಂಡ ಕಟೀಲ್, ಕಾಂಗ್ರೆಸ್ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಸಾವರ್ಕರ್ ದೇಶಭಕ್ತ. ನಾವು ದೇಶಭಕ್ತರ ಪರವಾಗಿ ವಾದ ಮಾಡುತ್ತೇವೆ. ಆದ್ರೆ ಕಾಂಗ್ರೆಸ್‌ನವರು ರಾಷ್ಟ್ರ ವಿರೋಧಿಗಳ ಪರವಾಗಿ ವಾದ ಮಾಡ್ತಾರೆ. ಕುಕ್ಕರ್ ಹಿಡಿದುಕೊಂಡು ಬಂದವನ ಪರವಾಗಿ ವಾದ ಮಾಡ್ತಾರೆ ಎಂದು ತಿರುಗೇಟು ನೀಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!