ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಂಡ್ಯದಲ್ಲಿ ಮನೆ ಮಾಡಲೇಬೇಕು ಅಂತಾ ಏನಿಲ್ಲ. ಜನರ ಮನಸ್ಸಿನಲ್ಲಿ ಮನೆ ಮಾಡಿದರೆ ಸಾಕು ಎಂದರು.ಮಾರ್ಚ್ 1 ರಿಂದ ತಿರುಪತಿ ದೇವಸ್ಥಾನ ದರ್ಶನಕ್ಕಾಗಿ ಹೊಸ ವ್ಯವಸ್ಥೆ ಜಾರಿ
ರಾಜ್ಯದ ಯುವ ಮೋರ್ಚಾ ಸಮಾವೇಶದ ಹೊಣೆ ನನಗೆ ನೀಡಿದ್ದಾರೆ. ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆಯ ಕೆಲಸ ಮಾಡುತ್ತೇನೆ. ಡಬಲ್ ಇಂಜಿನ್ ಸರ್ಕಾರವನ್ನು ರಾಜ್ಯದ ಜನ ಒಪ್ಪಿದ್ದಾರೆ. ಅಭಿವೃದ್ಧಿ, ಹಿಂದುತ್ವದ ಅಜೆಂಡಾದಡಿ ನಾವು ಮತ ಕೇಳುತ್ತೇವೆ. ಹಳೇ ಮೈಸೂರು ಭಾಗ ಸೇರಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಿನ್ನೆ ಮಂಡ್ಯ ತಾಲೂಕಿನ ಮಾಚಹಳ್ಳಿಗೆ ಮೊದಲ ಬಾರಿಗೆ ವಿಜಯೇಂದ್ರ ಭೇಟಿ ನೀಡಿದ್ದರು. ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯವನ್ನು ಛಿದ್ರಗೊಳಿಸಲು ಮುಂದಾಗಿದ್ದರು. ಇದೀಗ ಅಲ್ಲಿಂದನೇ ಸ್ಪರ್ಧಿಸುತ್ತಿದ್ದಾರೆ ಎಂಬ ಪ್ರಶ್ನೆ ಕಾಡಿತ್ತು.ಈ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಾರೆಯಾಗಿ ಮುಂದಿನ ದಿನಗಳಲ್ಲಿ ಯಾವ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬುದು ಕಾದುನೋಡಬೇಕಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು