ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ – ಅಪೋಲೊ ಆಸ್ಪತ್ರೆಗೆ ದಾಖಲು

Team Newsnap
1 Min Read

ಬೆಂಗಳೂರು : ವೃಕ್ಷಮಾತೆ , ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಭಾನುವಾರ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು ಬೆನ್ನು ಮೂಳೆ ಮುರಿದುಕೊಂಡಿದ್ದಾರೆ.

ತಿಮ್ಮಕ್ಕ ನನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಇಂದು ಸಂಜೆ 4.30ರ ವೇಳೆಗೆ ಬೆಂಗಳೂರಿನ ಮಂಜುನಾಥನಗರದಲ್ಲಿರುವ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿದೆ.

112 ವರ್ಷದ ಸಾಲುಮರದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಬೆನ್ನಿನ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದೆ, ಉಳಿದಂತೆ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕೌಟುಂಬಿಕ ಮೂಲಗಳಿಂದ ತಿಳಿದು ಬಂದಿದೆ.ಚಾಮರಾಜನಗರದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗೆ ಆಹುತಿ

ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಪರಿಸರದ ಮೇಲಿನ ತಮ್ಮ ಪ್ರೀತಿಯಿಂದ ಸಾಲುಮರದ ತಿಮ್ಮಕ್ಕ ಎಂದೇ ಖ್ಯಾತಿ ಪಡೆದಿದ್ದಾರೆ.

Share This Article
Leave a comment