ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಸಧ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಶೃಂಗೇರಿಯಲ್ಲಿ ಡಿ.ಕೆ ಶಿವಕುಮಾರ್ ಹೇಳಿದರು.
ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್ ಸುದ್ದಿಗಾರರ ಜೊತೆ ಮಾತನಾಡಿ ಸಿಎಂ ಅಭ್ಯರ್ಥಿ ಹೇಳಿಕೆ ವಿಚಾರದ ಕುರಿತು ಕಾಂಗ್ರೆಸ್ ಪಕ್ಷದ ನಿರ್ಧಾರವೇ ಅಂತಿಮ, ಹೈಕಮಾಂಡ್ ನಿರ್ಧಾರಕ್ಕೆ ನಾನು ಹಾಗೂ ಸಿದ್ದರಾಮಯ್ಯ ಬದ್ದವಾಗಿದ್ದೇವೆ ಎಂದರು.
ಶೀಘ್ರದಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಲಿದೆ ಎಂದರು.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ 2 ಪಟ್ಟಿ ಬಿಡುಗಡೆ ಮಾಡಿದ್ದು, 3 ನೇ ಪಟ್ಟಿ ಬಿಡುಗಡೆ ಸಂಬಂಧ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ ಈ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭಾಗಿಯಾಗಲಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯುವ ಇಂದಿನ ಸಭೆಯಲ್ಲಿ ಕಾಂಗ್ರೆಸ್ ನ 58 ಕ್ಷೇತ್ರಗಳ ಟಿಕೆಟ್ ಬಿಡುಗಡೆ ಸಂಬಂಧ ಕಾಂಗ್ರೆಸ್ ನಾಯಕರು ಸಮಾಲೋಚನೆ ನಡೆಸಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆ ಸಂಬಂಧ ನಿನ್ನೆ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಮುಕುಲ್ ವಾಸ್ನಿಕ್ ಸೇರಿ ಹಲವು ನಾಯಕರು ಭಾಗಿಯಾಗಿದ್ದು. 3 ನೇ ಪಟ್ಟಿ ಬಿಡುಗಡೆ ಸಂಬಂಧ ಚರ್ಚೆ ನಡೆದಿದೆ.ಇದನ್ನು ಓದಿ –ಸಿಬ್ಬಂದಿಗೆ ಥಳಿಸಿದ ಪ್ರಯಾಣಿಕ: ಲಂಡನ್ಗೆ ಹೊರಟಿದ್ದ ವಿಮಾನ ದೆಹಲಿಗೆ ವಾಪಸ್
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ