ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದೊಡ್ಡಿದೆ.
ತಮಿಳುನಾಡಿನಲ್ಲಿ ಅಬ್ಬರಿಸಿದ ಮಳೆರಾಯ ಇದೀಗ ಕರ್ನಾಟಕ, ಆಂಧ್ರ ಪ್ರದೇಶದಲ್ಲಿ ತನ್ನ ರುದ್ರನರ್ತನವನ್ನು ತೋರುತ್ತಿದ್ದಾನೆ
ಅದರಲ್ಲೂ ತಿರುಪತಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹದ ಸ್ಥಿತಿ ಉಂಟಾಗಿದೆ.
ತಿರುಪತಿ ದೇವಾಲಯವನ್ನು ಸಂಪರ್ಕಿಸುವ ಘಾಟ್ನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದೆ, ಎರಡು ಘಾಟ್ಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ತಿರುಪತಿ ದೇವಾಲಯವೇ ಸಂಪೂರ್ಣವಾಗಿ ಜಲಾವೃತವಾಗಿದೆ. ಬೆಟ್ಟದ ಸುತ್ತಮತ್ತಲಿನ ಜಲಪಾತಗಳು ರೌದ್ರ ರೂಪ ತಾಳಿವೆ. ನಗರದ ಪ್ರಮುಖ ರಸ್ತೆಗಳೆಲ್ಲ ಹೊಳೆಯಂತೆ ಮಾರ್ಪಟ್ಟಿವೆ.
ಇನ್ನು ತಿರುಮಲ ಬೆಟ್ಟದ ತಪ್ಪಲಿನಲ್ಲಿರುವ ಕಪಿಲೇಶ್ವರ ದೇವಸ್ಥಾನದ ಬಳಿ ಬೆಟ್ಟದ ಮೇಲಿನಿಂದ ಮಳೆ ನೀರು ಜಲಪಾತದ ರೀತಿಯಲ್ಲಿ ಭೋರ್ಗರೆಯುತ್ತಿರುವ ದೃಶ್ಯಗಳು ಮೈ ಜುಮ್ಮೆನಿಸುತ್ತಿವೆ.
ಸ್ವರ್ಣಮುಖಿ ನದಿಯಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದು ಅಕ್ಕಪಕ್ಕದ ಹಳ್ಳಿಗಳ ಜನವಸತಿ ಪ್ರದೇಶಗಳಿಗೆ ನುಗ್ಗಿದೆ. ಪರಿಣಾಮ ಹಲವು ಹಳ್ಳಿಗಳು ಜಲಾವೃತಗೊಂಡಿವೆ ಜನರಲ್ಲಿ ಆತಂಕ ಮೂಡಿಸಿದೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ