ವಾಯುಭಾರ ಕುಸಿತದ ಫಜೀತಿ: ತಿರುಪತಿ ತಿಮ್ಮಪ್ಪನಿಗೂ ಮಳೆಯ ಸಂಕಷ್ಟ

Team Newsnap
1 Min Read

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದೊಡ್ಡಿದೆ.

ತಮಿಳುನಾಡಿನಲ್ಲಿ ಅಬ್ಬರಿಸಿದ ಮಳೆರಾಯ ಇದೀಗ ಕರ್ನಾಟಕ, ಆಂಧ್ರ ಪ್ರದೇಶದಲ್ಲಿ ತನ್ನ ರುದ್ರನರ್ತನವನ್ನು ತೋರುತ್ತಿದ್ದಾನೆ

ಅದರಲ್ಲೂ ತಿರುಪತಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹದ ಸ್ಥಿತಿ ಉಂಟಾಗಿದೆ.

ತಿರುಪತಿ ದೇವಾಲಯವನ್ನು ಸಂಪರ್ಕಿಸುವ ಘಾಟ್​​ನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದೆ, ಎರಡು ಘಾಟ್​ಗಳನ್ನು ಸಂಪೂರ್ಣವಾಗಿ ಬಂದ್​ ಮಾಡಲಾಗಿದೆ. ತಿರುಪತಿ ದೇವಾಲಯವೇ ಸಂಪೂರ್ಣವಾಗಿ ಜಲಾವೃತವಾಗಿದೆ. ಬೆಟ್ಟದ ಸುತ್ತಮತ್ತಲಿನ ಜಲಪಾತಗಳು ರೌದ್ರ ರೂಪ ತಾಳಿವೆ. ನಗರದ ಪ್ರಮುಖ ರಸ್ತೆಗಳೆಲ್ಲ ಹೊಳೆಯಂತೆ ಮಾರ್ಪಟ್ಟಿವೆ.

ಇನ್ನು ತಿರುಮಲ ಬೆಟ್ಟದ ತಪ್ಪಲಿನಲ್ಲಿರುವ ಕಪಿಲೇಶ್ವರ ದೇವಸ್ಥಾನದ ಬಳಿ ಬೆಟ್ಟದ ಮೇಲಿನಿಂದ ಮಳೆ ನೀರು ಜಲಪಾತದ ರೀತಿಯಲ್ಲಿ ಭೋರ್ಗರೆಯುತ್ತಿರುವ ದೃಶ್ಯಗಳು ಮೈ ಜುಮ್ಮೆನಿಸುತ್ತಿವೆ.

ಸ್ವರ್ಣಮುಖಿ ನದಿಯಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದು ಅಕ್ಕಪಕ್ಕದ ಹಳ್ಳಿಗಳ ಜನವಸತಿ ಪ್ರದೇಶಗಳಿಗೆ ನುಗ್ಗಿದೆ. ಪರಿಣಾಮ ಹಲವು ಹಳ್ಳಿಗಳು ಜಲಾವೃತಗೊಂಡಿವೆ ಜನರಲ್ಲಿ ಆತಂಕ ಮೂಡಿಸಿದೆ.

Share This Article
Leave a comment