December 27, 2024

Newsnap Kannada

The World at your finger tips!

politics,CM,Delhi

CM : could not meet union minister Amith Shah

ಈ ಬದುಕು , ಅಧಿಕಾರ ಶಾಶ್ವತವಲ್ಲ-ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ: ಸಿಎಂ ಭಾವುಕ

Spread the love

ಈ ಬದುಕು, ಅಧಿಕಾರವೂ ಶಾಶ್ವತವೂ ಅಲ್ಲ. ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ ಹೇಳಿ ಮುಖ್ಯ ಮಂತ್ರಿ ಸ್ಥಾನವೂ ಹೋಗಬಹುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೂಚ್ಯವಾಗಿ ಭಾವುಕರಾದರು.

ಶಿಗ್ಗಾಂವಿ ಪಟ್ಟಣದ ಸಂತೆ ಮೈದಾನದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಅಡಿಗಲ್ಲು ಸಮಾರಂಭಕ್ಕೆ ಸಿಎಂ ಮಾತನಾಡಿದರು

ಕನಾ೯ಟಕ ಸಂತರ ನಾಡು, ಇಲ್ಲಿ ವೈಚಾರಿಕ ಕ್ರಾಂತಿಯನ್ನು ಮಾಡಿದ ಗುರುಗಳಿದ್ದಾರೆ. ಕನಕದಾಸರು, ಸಂತ ಶಿಶುನಾಳ ಶರೀಫರು ಇದ್ದ ತಾಲೂಕು. ಯಾವುದು ಶಾಶ್ವತವಲ್ಲ, ಈ ಬದುಕು ಶಾಶ್ವತವಲ್ಲ. ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ. ಸ್ಥಾನಮಾನಗಳು ಶಾಶ್ವತವಲ್ಲ ಎಂದು ಹೇಳಿ ಭಾವುಕರಾದರು.

ನಿಮ್ಮೆಲ್ಲರ ಆಶೀರ್ವಾದದಿಂದ ಈ ರಾಜ್ಯದ ಮುಖ್ಯಮಂತ್ರಿಯಾಗಿ ನಿಂತಿದ್ದೇನೆ. ಕ್ಷೇತ್ರದ ಹೊರಗಡೆ ಇದ್ದಾಗ ನಾನು ಸಿಎಂ, ಗೃಹ ಸಚಿವ. ಆದರೆ ಕ್ಷೇತ್ರದ ಒಳಗಡೆ ಬಂದಾಗ ನಾನು ಬಸವರಾಜ ಬೊಮ್ಮಾಯಿ ಆಗಿ ಉಳಿಯುತ್ತೇನೆ. ಬಸವರಾಜ ಬೊಮ್ಮಾಯಿ ಅನ್ನೋದು ಶಾಶ್ವತ. ಅದರ ಹಿಂದಿರುವ ಪದನಾಮಗಳು ಶಾಶ್ವತವಲ್ಲ. ನಾನು ನಿಮ್ಮೂರಿಗೆ ಬಂದಾಗ ರೊಟ್ಟಿ ತಿನ್ನಿಸಿದ್ದೀರಿ, ನವಣಿ ಅಕ್ಕಿ ಅನ್ನ ಮಾಡಿ ಹಾಕಿದ್ದೀರಿ. ನಾನೇನು ಕೆಲಸ ಮಾಡಿದ್ರೂ ಆ ಋಣ ತೀರಿಸಲು ಆಗೋದಿಲ್ಲ ಎಂದು ಭಾವುಕರಾದರು.

Copyright © All rights reserved Newsnap | Newsever by AF themes.
error: Content is protected !!