ರಾಜ್ಯದಲ್ಲಿ ಪ್ರಸ್ತುತ ಎರಡು ತಿಂಗಳಿನಿಂದ ಕೋರೋನಾ ಸೋಂಕಿತರು ಹೆಚ್ಚಾಗುತ್ತಿದ್ದಾರೆ. ಹಾಗಾಗಿ ಶಾಲೆ ಆರಂಭಿಸಲು ಇದು ಸೂಕ್ತ ಸಮಯವಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ‘ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿಲ್ಲ. ಹಾಗಾಗಿ ಶಾಲೆ ಪುನರಾರಂಭ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿಲ್ಲ’ ಎಂದು ಹೇಳಿದರು.
‘ಶಾಲಾ ಪುನರ್ ಆರಂಭದ ಕುರಿತಂತೆ ಕೇಂದ್ರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆದರೆ ರಾಜ್ಯದಲ್ಲಿ ಕೊರೋನಾ ಹತೋಟಿಗೆ ಬರದ ಹಿನ್ನೆಲೆಯಲ್ಲಿ ಶಾಲೆ ಆರಂಭ ಮಾಡುತ್ತಿಲ್ಲ. ಇದರ ಬಗ್ಗೆ ತಜ್ಞರ ಸಲಹೆ ಪಡೆದುಕೊಳ್ಳಲಾಗುತ್ತಿದೆ. ಕೆಲವು ವಾರಗಳ ನಂತರ ಪಕ್ಕದ ರಾಜ್ಯಗಳ ಕ್ರಮ ಗಮನಿಸಿ ಶಾಲೆ ಆರಂಭದ ಬಗ್ಗೆ ಯೋಚಿಸಲಾಗುವುದು’ ಎಂದು ಶಾಲೆಗಳ ಆರಂಭದ ಬಗ್ಗೆ ಪ್ರತಿಕ್ರಿಯೆ ನೀಡಿದರು.
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು